ಲಾರಿ–ಬಸ್ ಡಿಕ್ಕಿ, ಬೆಂಕಿಗಾಹುತಿಯಾಗಿ 9 ಮಂದಿ ಸಾವು
ಚಿತ್ರದುರ್ಗ, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಸ್ಲೀಪರ್ ಬಸ್ ಬೆಂಕಿಗಾಹುತಿಯಾಗಿ ಒಟ್ಟು 9 ಮಂದಿ ಸಜೀವ ದಹನವಾಗಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ತಡರಾತ್ರಿ ನಡೆದಿದೆ. ಹಿರಿಯೂರಿನಿ
Accident


ಚಿತ್ರದುರ್ಗ, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಸ್ಲೀಪರ್ ಬಸ್ ಬೆಂಕಿಗಾಹುತಿಯಾಗಿ ಒಟ್ಟು 9 ಮಂದಿ ಸಜೀವ ದಹನವಾಗಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಹಿರಿಯೂರಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಲಾರಿ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಡಿವೈಡರ್ ದಾಟಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರು ಹೊರಬರಲಾಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸೀಬರ್ಡ್ ಬಸ್ಸಿನ 8 ಪ್ರಯಾಣಿಕರು ಹಾಗೂ ಲಾರಿ ಚಾಲಕ ಸೇರಿ 9 ಮಂದಿ ಮೃತಪಟ್ಟಿದ್ದಾರೆ ಎಂದು ಐಜಿಪಿ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

ಗೊರ್ಲತ್ತು ಗ್ರಾಮದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಬಸ್ಸಿನಿಂದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಲಾರಿ ಚಾಲಕ ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಶಿರಾ ಹಾಗೂ ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ,” ಎಂದು ತಿಳಿಸಿದರು.

ಅಪಘಾತದಲ್ಲಿ 9 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೆಂಗಳೂರಿನಿಂದ ಡಿಎನ್‌ಎ ಹಾಗೂ ಸುಕೋ ತಂಡ ಆಗಮಿಸಿದ್ದು, ಮೃತರ ಗುರುತಿನ ಪ್ರಕ್ರಿಯೆ ಮುಂದುವರಿದಿದೆ.

ಈ ದುರ್ಘಟನೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande