
ಬೆಂಗಳೂರು, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa