
ವಿಜಯಪುರ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಬಸ್ ದುರಂತ ಪ್ರಕರಣದ ಕುರಿತು ವಿಜಯಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತನಿಖೆಗೆ ಆಗ್ರಹಿಸಿದ್ದಾರೆ.
ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು, ಚಿತ್ರದುರ್ಗ ಬಸ್ ದುರಂತದ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ರಾಜ್ಯದಲ್ಲಿ ಇತ್ತೀಚೆಗೆ ಬಸ್ ಅಪಘಾತಗಳು ಹಾಗೂ ಬಸ್ ಸುಡುವ ಘಟನೆಗಳು ಹೆಚ್ಚಾಗುತ್ತಿರುವುದರ ಹಿಂದೆ ಇರುವ ಕಾರಣಗಳನ್ನು ಗಂಭೀರವಾಗಿ ಪರಿಶೀಲಿಸಬೇಕಾಗಿದೆ ಎಂದರು.
ಯಾವ ಕಾರಣದಿಂದ ಬಸ್‌ಗಳು ಬೆಂಕಿಗಾಹುತಿಯಾಗುತ್ತಿವೆ ಎಂಬುದು ಸಮಗ್ರ ತನಿಖೆ ಅಗತ್ಯವಿದೆ. ಅಮಾಯಕರ ಜೀವಗಳು ದಹನವಾಗುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ಡೇಂಜರ್ ಬಸ್‌ಗಳ ಲೈಸೆನ್ಸ್‌ಗಳನ್ನು ತಕ್ಷಣವೇ ರದ್ದುಪಡಿಸಬೇಕು. ಸಾರಿಗೆ ಇಲಾಖೆಯವರು ಎಲ್ಲಾ ಬಸ್‌ಗಳ ತಾಂತ್ರಿಕ ಸ್ಥಿತಿ, ಸುರಕ್ಷತಾ ಮಾನದಂಡಗಳು ಹಾಗೂ ನಿರ್ವಹಣೆಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದರು.
ಇದೇ ವೇಳೆ, ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ದೇವರು ಧೈರ್ಯ ನೀಡಲಿ ಎಂದು ಸಂತಾಪ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande