
ಬೆಂಗಳೂರು, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಿತ್ರದುರ್ಗದ ಹಿರಿಯೂರಿನ ಬಳಿ ಅಪಘಾತಕ್ಕೆ ಒಳಗಾಗಿ ಅಗ್ನಿ ಅವಘಡ ಸಂಭವಿಸಿದ್ದು ಅದರಲ್ಲಿ 9 ಕ್ಕೂ ಹೆಚ್ಚು ಜನ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ತಿಳಿದು ಅತ್ಯಂತ ದುಃಖವಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಸರ್ಕಾರವು ಮೃತಪಟ್ಟ ಕುಟುಂಬದವರಿಗೆ ಕೂಡಲೇ ಪರಿಹಾರ ಘೋಷಿಸಿಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ.
ದೇವರು ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa