ಡಿ. 31 ರಂದು ಮನಸೂರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಹಾಗೂ ರಾಷ್ಟ್ರೀಯ ಸಂಗೀತೋತ್ಸವ
ಪುರಸ್ಕೃತ
ಡಿ. 31 ರಂದು ಮನಸೂರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಹಾಗೂ ರಾಷ್ಟ್ರೀಯ ಸಂಗೀತೋತ್ಸವ


ಧಾರವಾಡ, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಡಾ. ಮಲ್ಲಿಕಾರ್ಜುನ ಮನಸೂರ ಅವರ 115ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 31, 2025 ರಂದು ಬೆಳಿಗ್ಗೆ 9:30 ಗಂಟೆಗೆ ಡಾ. ಮಲ್ಲಿಕಾರ್ಜುನ ಮನಸೂರ ಟ್ರಸ್ಟ್‍ನ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದೆ.

ಡಾ. ಮಲ್ಲಿಕಾರ್ಜುನ ಮನಸೂರ ಅವರ ಪುಣ್ಯ ಸಮಾಧಿ ಸ್ಥಳಕ್ಕೆ ಪೂಜಾ ಕಾರ್ಯಕ್ರಮ ಹಾಗೂ ನಂತರದಲ್ಲಿ ಅಕ್ಕಮಹಾದೇವಿ ಆಲೂರ ಮತ್ತು ಡಾ. ಮಿಥುನ ಚಕ್ರವರ್ತಿ, ಉಜಿರೆ ಇವರು ಸಂಗೀತ ಸೇವೆಯನ್ನು ಸಮರ್ಪಿಸಲಿದ್ದಾರೆ.

ಡಿಸೆಂಬರ್ 31, 2025 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸಮಾರಂಭದ ನಂತರ ಪ್ರಶಸ್ತಿ ಪುರಸ್ಕøತರಿಂದ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ರಾಷ್ಟ್ರೀಯ ಪ್ರಶಸ್ತಿ-2025ನ್ನು ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರಾದ ಪುಣೆಯ ವಿದುಷಿ ಅಲಕಾ ದೇವ್ ಮಾರುಲ್ಕರ್ ಅವರಿಗೆ ಪ್ರದಾನ ಮಾಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಕನಕನಹಳ್ಳಿಯ ಯುವ ಗಾಯಕ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಡಾ. ಹರೀಶ ಹೆಗಡೆ ಅವರಿಗೆ ಹಾಗೂ ಯುವ ತಬಲಾ ವಾದಕರಾದ ಡಾ. ನಾಗಲಿಂಗ ಮುರಗಿ ಇವರಿಗೆ ರಾಷ್ಟ್ರೀಯ ಯುವ ಪ್ರಶಸ್ತಿ-2025ನ್ನು ಪ್ರದಾನ ಮಾಡಲಾಗುವುದು.

ಕಾರ್ಯಕ್ರಮದಲ್ಲಿ , ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಶ್ರೀ ಮುರುಗೇಂದ್ರ ಶಿವಯೋಗಿಗಳ ಮಠದ ಶ್ರೀ ಮ.ನಿ.ಪ್ರ ಸಿದ್ಧಲಿಂಗ ಮಹಾಸ್ವಾಮಿಗಳು ಅವರು ದಿವ್ಯ ಸಾನಿಧ್ಯವನ್ನು ವಹಿಸುವರು. ಹಿರಿಯ ಸಂಗೀತ ಕಲಾವಿದ ಡಾ. ಮಲ್ಲಿಕಾರ್ಜುನ ಮನಸೂರ ಅವರ ಸುಪುತ್ರಿ ನೀಲಾ ಎಂ. ಕೊಡ್ಲಿ ಅವರು ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಮಾಡುವರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹಾಗೂ ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ಅವರು ಭಾಗವಹಿಸುವರು.

ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನ ಅಧ್ಯಕ್ಷ ಪಂ. ಎಂ ವೆಂಕಟೇಶಕುಮಾರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಟ್ರಸ್ಟಿನ ಸದಸ್ಯರು ಉಪಸ್ಥಿತರಿರುವರು.

ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ರಾಷ್ಟ್ರೀಯ ಯುವ ಪ್ರಶಸ್ತಿ ಪಡೆದ ಡಾ. ನಾಗಲಿಂಗ ಮುರಗಿ ಅವರ ವಾದ್ಯ ಸಂಗೀತ ಕಾರ್ಯಕ್ರಮ, ಡಾ. ಹರೀಶ ಹೆಗಡೆ ಅವರ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ವಿದುಷಿ ಅಲಕಾ ದೇವ್ ಮಾರುಲ್ಕರ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯುವುದು ಎಂದು ಟ್ರಸ್ಟ್ ನ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande