
ನವದೆಹಲಿ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸನಲ್ಲಿ ಸಂತಾಪ ಸೂಚಿಸಿದ್ದಾರೆ.
ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa