₹60,000 ಲಂಚ ಸ್ವೀಕಾರ ; ಕೇಂದ್ರೀಯ ವಿದ್ಯಾಲಯದ ಹಿರಿಯ ಅಧಿಕಾರಿ ಸಿಬಿಐ ಬಲೆಗೆ
ನವದೆಹಲಿ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಧ್ಯ ಪ್ರದೇಶದ ದೇವಾಸ್ ನಗರದಲ್ಲಿರುವ ಬಿಎನ್‌ಪಿಯ ಕೇಂದ್ರೀಯ ವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ₹60,000 ಲಂಚ ಸ್ವೀಕರಿಸುತ್ತಿದ್ದಾಗ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ ಬಂಧಿಸಿದೆ. ಡಿಸೆಂಬರ್ 23ರಂದು ಸ್ವೀಕರಿಸಿದ ಲಿಖಿತ ದೂರಿನ ಆಧಾರದ ಮೇಲ
CBI


ನವದೆಹಲಿ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಧ್ಯ ಪ್ರದೇಶದ ದೇವಾಸ್ ನಗರದಲ್ಲಿರುವ ಬಿಎನ್‌ಪಿಯ ಕೇಂದ್ರೀಯ ವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ₹60,000 ಲಂಚ ಸ್ವೀಕರಿಸುತ್ತಿದ್ದಾಗ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ ಬಂಧಿಸಿದೆ.

ಡಿಸೆಂಬರ್ 23ರಂದು ಸ್ವೀಕರಿಸಿದ ಲಿಖಿತ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರೀಯ ವಿದ್ಯಾಲಯದಲ್ಲಿ ಹಿರಿಯ ಕಾರ್ಯದರ್ಶಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಂಜನ್ ಭಾರ್ತಿ ಅವರು, ಭದ್ರತಾ ಹಾಗೂ ಮಾನವಶಕ್ತಿ ಸೇವೆಗಳಿಗೆ ಸಂಬಂಧಿಸಿದ ಬಾಕಿ ಬಿಲ್‌ಗಳನ್ನು ಪಾವತಿಸಲು ₹60,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರುದಾರರು ಆರೋಪಿಸಿದ್ದರು.

ದೂರಿನ ಪರಿಶೀಲನೆಯ ಬಳಿಕ ಸಿಬಿಐ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಆರೋಪಿ ಅಧಿಕಾರಿ ಬ್ಯಾಂಕಿಂಗ್ ಮಾರ್ಗಗಳ ಮೂಲಕ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ತಕ್ಷಣವೇ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಬಂಧಿತ ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆಗಾಗಿ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಸಿಬಿಐ ತಿಳಿಸಿದೆ. ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande