ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ
ಬಳ್ಳಾರಿ, 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ಬೆಂಬಲ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್
ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ


ಬಳ್ಳಾರಿ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲೆಯಲ್ಲಿ ಬೆಂಬಲ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.8000 ರಂತೆ ಖರೀದಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತವು ಖರೀದಿ ಏಜೆನ್ಸಿಯಾಗಿದೆ.

ಬಳ್ಳಾರಿ ನಗರದ ಎಸ್.ಪಿ ವೃತ್ತದ ಬಳಿಯ ಮಾರುತಿ ನಗರದ 2ನೇ ಕ್ರಾಸ್ ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ದೂ.08392266489, ಮೊ.9035829283). ಬಳ್ಳಾರಿ ನಗರದ ಹರಿಶ್ಚಂದ್ರ ಘಾಟ್ ರಸ್ತೆಯ ಮಿಲ್ಲರ್ ಪೇಟೆಯ ನಂ:124 ರ ಟಿಎಪಿಸಿಎಂಎಸ್ (ಮೊ.9535151619, 6361665722).

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ (ಮೊ.9449664453).

2025-26ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‍ಐಡಿ ಪಡೆಯುವುದು ಕಡ್ಡಾಯ, ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಗೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು.

ಆಧಾರ್ ಕಾರ್ಡ್ (ಮೂಲ), ಬ್ಯಾಂಕ್ ಖಾತೆ (ಆಧಾರ್ ಕಾರ್ಡ್ ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಮಾರಾಟಕ್ಕಾಗಿ ಖರೀದಿ ಕೇಂದ್ರಕ್ಕೆ ತರುವುದು. ತೊಗರಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಪ್ರಕಟಣೆಗೊಂಡ 80 ದಿನಗಳೊಳಗೆ ನೋಂದಣಿ ಮಾಡಿಸಬೇಕು ಹಾಗೂ ನೋಂದಣಿ ಚೀಟಿ ಪಡೆದುಕೊಳ್ಳಬೇಕು.

ನಿಗದಿತ ಅವಧಿಯೊಳಗೆ ನೋಂದಣಿಗೊಂಡ ರೈತರಿಂದ ಪ್ರತಿ ಎಕರೆಗೆ 04 (ನಾಲ್ಕು) ಕ್ವಿಂಟಾಲ್ ನಂತೆ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಷ್ಟು ತೊಗರಿ ಉತ್ಪನ್ನವನ್ನು 2026 ರ ಜನವರಿ 01 ರಿಂದ 90 ದಿನಗಳವರೆಗೆ ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.

ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಸದುಪಯೋಗ ರೈತರೇ ನೇರವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್. ಕೆ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande