


ಕೊಪ್ಪಳ, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2026ರ ಜನವರಿ 1 ರಂದು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜನವರಿ 1 ರಂದು ಸರಳವಾಗಿ ಆಚರಿಸಬೇಕೆಂಬ ಸಮುದಾಯಗಳ ಮುಖಂಡರ ಕೋರಿಕೆ ಮೇರೆಗೆ ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಪ್ಪಾರ್ಚನೆ ಮಾಡಿ ಗೌರವಿಸಲಾಗುವುದು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಉಪಸ್ಥಿತರಿರಬೇಕೆಂದರು.
ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಸರಕಾರಿ ಕಛೇರಿಗಳಲ್ಲಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ನಡೆಯುವ ಪೂಜಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಮತ್ತು ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪರ್ವತಗೌಡ ಹಿರೇಗೌಡರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧಿಕಾರೇತರ ಸದಸ್ಯರಾದ ದೇವೇಂದ್ರಪ್ಪ ಬಡಿಗೇರ್, ಪಂಚವೃತ್ತಿ ವಿಶ್ವಕರ್ಮ ಸಮಾಜ ಸಂಘದ ಪ್ರಧಾನ ಕಾರ್ಯದರ್ಶಿ ಬ್ರಹ್ಮಾನಂದ್ ಮಳಿಯಪ್ಪ ಬಡಿಗೇರ್, ವಿಶ್ವಕರ್ಮ ಮಹಾ ಒಕ್ಕೂಟದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಮೌನೇಶ್ ಬಡಿಗೇರ್ ಮಾದಿನೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್ಚರೇಶ್ ಹೊಸಮನಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಕೊಪ್ಪಳದ ಮಾಜಿ ಅಧ್ಯಕ್ಷರಾದ ಕೃಷ್ಣ ಬಡಿಗೇರ್ ಮಂಡಲಮರಿ, ವಿಶ್ವಕರ್ಮ ಸಮಾಜ ತಾಲೂಕ ಘಟಕದ ಅಧ್ಯಕ್ಷರಾದ ದೇವೇಂದ್ರಪ್ಪ ಬಡಿಗೇರ್, ವಿಶ್ವಕರ್ಮ ಸೇವಾ ಸಮಿತಿ ನಗರ ಘಟಕದ ಅಧ್ಯಕ್ಷರಾದ ಮಂಜುನಾಥ ಬನ್ನಿಕೊಪ್ಪ, ಕಾರ್ಯದರ್ಶಿ ಉಮೇಶ್ ಪತ್ತಾರ ಸದಸ್ಯರಾದ ಬಸವರಾಜ್ ಅರ್ಕಸಾಲಿ, ಸಮಾಜದ ಜಿಲ್ಲಾ ಗೌರವಾಧ್ಯಕ್ಷರಾದ ಈಶಪ್ಪ ಬಡಿಗೇರ್ ನರಸಾಪುರ, ಮುಖಂಡರಾದ ಪ್ರಭಾಕರ್ ರಾಮಣ್ಣ ಬಡಿಗೇರ್, ಕಲ್ಲೇಶ್ ಬಡಿಗೇರ್ ಭಾಗ್ಯನಗರ ಸೇರಿದಂತೆ ಇನ್ನೂ ಪ್ರಮುಖರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್