ದೆಹಲಿಯಲ್ಲಿ ಮೊಳಗಿದ ದಲಿತ ಮುಖ್ಯಮಂತ್ರಿ ಕೂಗು
ನವದೆಹಲಿ, 27 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭವಾದ ಬೆನ್ನಲ್ಲೇ, ಕರ್ನಾಟಕದಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ದಲಿತ ಮುಖ್ಯಮಂತ್ರಿಯನ್ನು ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರಧಾನ ಕ
Protest


Protest


ನವದೆಹಲಿ, 27 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭವಾದ ಬೆನ್ನಲ್ಲೇ, ಕರ್ನಾಟಕದಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ದಲಿತ ಮುಖ್ಯಮಂತ್ರಿಯನ್ನು ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಪ್ರಧಾನ ಕಚೇರಿಯ ಹೊರಭಾಗದಲ್ಲಿ ಸೇರಿದ್ದ ಕಾರ್ಯಕರ್ತರು, ಬ್ಯಾನರ್‌ಗಳು ಹಾಗೂ ಪೋಸ್ಟರ್‌ಗಳನ್ನು ಹಿಡಿದುಕೊಂಡು, ಪ್ರಸ್ತುತ ರಾಜ್ಯ ಗೃಹ ಸಚಿವರಾದ ಜಿ. ಪರಮೇಶ್ವರ ಅವರನ್ನು ಮುಂದಿನ ಕರ್ನಾಟಕ ಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು ಘೋಷಣೆಗಳನ್ನು ಹಾಕಿದರು.

ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ತತ್ವದ ಅನುಷ್ಠಾನಕ್ಕಾಗಿ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯು ಶಾಂತಿಯುತವಾಗಿದ್ದರೂ, ಕಾಂಗ್ರೆಸ್ ಹೈಕಮಾಂಡ್‌ ಗಮನ ಸೆಳೆಯುವ ಉದ್ದೇಶದಿಂದ ಕಾರ್ಯಕರ್ತರು ತಮ್ಮ ಬೇಡಿಕೆಯನ್ನು ಸ್ಪಷ್ಟವಾಗಿ ಮುಂದಿಟ್ಟರು.

ಕರ್ನಾಟಕದಲ್ಲಿ ದಲಿತ ನಾಯಕತ್ವಕ್ಕೆ ನ್ಯಾಯ ಸಿಗಬೇಕೆಂಬುದು ತಮ್ಮ ಆಗ್ರಹವಾಗಿದ್ದು, ಜಿ. ಪರಮೇಶ್ವರ ಅವರಿಗೆ ಆಡಳಿತದ ಅನುಭವ ಹಾಗೂ ಪಕ್ಷದೊಳಗಿನ ಗೌರವ ಇರುವುದರಿಂದ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಅವರು ಹೇಳಿದರು.

ಇದರ ನಡುವೆ, ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಉನ್ನತ ನಾಯಕತ್ವ ಭಾಗವಹಿಸಿತು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಹಲವು ಹಿರಿಯ ನಾಯಕರು ಸಭೆಗೆ ಹಾಜರಾಗಿದ್ದರು.

ಸಭೆಯಲ್ಲಿ ಮುಂಬರುವ ಚುನಾವಣಾ ತಂತ್ರ, ಪಕ್ಷದ ಸಂಘಟನಾ ಬಲವರ್ಧನೆ ಹಾಗೂ ಸಮಕಾಲೀನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande