ಪ್ರತಿಯೊಬ್ಬ ನಾಗರಿಕರು ಕಾನೂನು ಪಾಲನೆಗೆ ನ್ಯಾಯಮೂರ್ತಿಗಳ ಕರೆ
ಪ್ರತಿಯೊಬ್ಬ ನಾಗರೀಕರು ಕಾನೂನು ಪಾಲನೆಗೆ ನ್ಯಾಯಮೂರ್ತಿಗಳ ಕರೆ
ಕೋಲಾರ ನಗರದ ನವ ಸಮಾಜ ಮತ್ತು ಪರಿಸರ ಅಭಿವೃದ್ಧಿ ಸಂಸ್ಥೆಯ ಕಛೇರಿಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟೇಶ್ ಮೂರ್ತಿ ಉದ್ಘಾಟಿಸಿದರು.


ಕೋಲಾರ, ೨೭ ಡಿಸೆಂಬರ್ (ಹಿ.ಸ) :

ಆ್ಯಂಕರ್ : ನವ ಸಮಾಜ ಮತ್ತು ಪರಿಸರ ಅಭಿವೃದ್ಧಿ ಸಂಸ್ಥೆ ಆಯೋಜಿಸುವ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ ವಿಷಯ. ಸಂಸ್ಥೆಯು ಜನರಿಗೆ ಅನುಕೂಲವಾಗುವಂತಹ ಉತ್ತಮ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿರುವುದನ್ನು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ನಟೇಶ್ ಶ್ಲಾಘಿಸಿದರು.

ನವ ಸಮಾಜ ಮತ್ತು ಪರಿಸರ ಅಭಿವೃದ್ಧಿ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ – ಕೋಲಾರ ಹಾಗೂ ಯಂಗ್ ಸ್ಟಾರ್ ಗ್ರೂಪ್, ಹಾವೇರಿ ಮೊಹಲ್ಲಾ, ಕೋಲಾರ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಹಾಗೂ ಸಂಸ್ಥೆಯ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ನಾಗರಿಕರೂ ಕಾನೂನುಗಳನ್ನು ಪಾಲಿಸುವುದು ಅತ್ಯಗತ್ಯ. ವಿವಾಹಕ್ಕೆ ಸಂಬAಧಿಸಿದAತೆ ಮಹಿಳೆಯರಿಗೆ ೧೮ ವರ್ಷ ಹಾಗೂ ಪುರುಷರಿಗೆ ೨೧ ವರ್ಷ ಪೂರೈಸಿದ ನಂತರವೇ ವಿವಾಹ ಮಾಡಬೇಕು ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಲಿ ಎಂದು ಶುಭ ಹಾರೈಸಿದರು.

ನವ ಸಮಾಜ ಮತ್ತು ಪರಿಸರ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಷಮ್ಸ್ ಎಂ.ಬಿ. ಮಾತನಾಡಿ, ನಮ್ಮ ಸಂಸ್ಥೆ ಸ್ಥಾಪನೆಯಾಗಿ ನಾಲ್ಕು ವರ್ಷವಾಗಿದೆ. ಈ ಅವಧಿಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ, ಕಾನೂನು ಅರಿವು ಕಾರ್ಯಕ್ರಮಗಳು, ಗಿಡ ನೆಡುವ ಅಭಿಯಾನ, ಪ್ಲಾಸ್ಟಿಕ್ ಮುಕ್ತ ಅಭಿಯಾನ, ಸ್ವಚ್ಛ ಭಾರತ ಅಭಿಯಾನ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ. ಮುಂದಿನ ದಿನಗಳಲ್ಲಿಯೂ ಇಂತಹ ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

ಕಾರ್ಯದರ್ಶಿ ಮುಸ್ತಫಾ ಪಾಷಾ ಮಾತನಾಡಿ, ಸಂಸ್ಥೆಯ ಕಚೇರಿ ಉದ್ಘಾಟನೆಯೊಂದಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನರಿಗೆ ಕಾನೂನಿನ ಬಗ್ಗೆ ಅರಿವು ಮೂಡಬೇಕು, ಅಪರಾಧಗಳಿಂದ ದೂರವಿರಬೇಕು ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂಬುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗಮನ ಮಹಿಳಾ ಸಮೂಹದ ಶಾಂತಮ್ಮ, ನಿರೂಪಕಿ ಹಾಗೂ ಗಾಯಕಿ ಮಂಜುಳಾ, ಮಾತ್ತೇನಹಳ್ಳಿ ನಾರಾಯಣಸ್ವಾಮಿ, ಹೂಹಳ್ಳಿ ನಾಗರಾಜ್, ಬೀದಿಬದಿ ವ್ಯಾಪಾರಿಗಳ ಜಿಲ್ಲಾ ಅಧ್ಯಕ್ಷ ಸಲೀಂ, ನಗರಸಭೆ ಸದಸ್ಯ ಹಿದಾಯತ್ ಉಲ್ಲಾ, ಹಿರಿಯ ವಕೀಲರು ಆಸಿಫ್, ತೌಸೀಫ್, ಇಮ್ರಾನ್, ಜುನೈದ್, ಅಲೀಮ್, ಆದಿಲ್, ಕಾರ್ಮಿಕರ ಜಿಲ್ಲಾ ಅಧ್ಯಕ್ಷ ಸಮೀರ್, ಆರೋಗ್ಯನಾಥ ಭಾಗವಹಿಸಿದ್ದರು.

ಚಿತ್ರ : ಕೋಲಾರ ನಗರದ ನವ ಸಮಾಜ ಮತ್ತು ಪರಿಸರ ಅಭಿವೃದ್ಧಿ ಸಂಸ್ಥೆಯ ಕಛೇರಿಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟೇಶ್ ಮೂರ್ತಿ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande