
ದಾವಣಗೆರೆ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಭೇಟಿ ನೀಡಿ ವೀಕ್ಷಣೆ ನಡೆಸಿದರು.
ಈ ವೇಳೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿದ ಸಂಸದೆ, ಕಾಮಗಾರಿಯನ್ನು ಉನ್ನತ ಗುಣಮಟ್ಟದಲ್ಲಿ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ವೇಳೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ನಿಯಮಿತ ಮೇಲ್ವಿಚಾರಣೆ ನಡೆಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಸ್ತೆ ಅಭಿವೃದ್ಧಿಯಿಂದ ಪಟ್ಟಣದ ಸಂಚಾರ ಸುಗಮಗೊಳ್ಳಲಿದ್ದು, ಸ್ಥಳೀಯ ನಿವಾಸಿಗಳು ಹಾಗೂ ವ್ಯಾಪಾರಿಗಳಿಗೆ ಮಹತ್ವದ ಅನುಕೂಲ ಒದಗಲಿದೆ ಎಂದು ಸಂಸದೆ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa