

ರಾಯಚೂರು, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ರಾಯಚೂರಿನಲ್ಲಿರುವ ಅವರ ಸಚಿವರ ಕಾರ್ಯಾಲಯದಲ್ಲಿ ಸಿರಿವಾರ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಕುರಿತು ಚರ್ಚಿಸಿದರು.
ನೂತನ ಸಿರವಾರ ತಾಲೂಕಿನ ತಾಲೂಕ ಕೇಂದ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಕಾಮಗಾರಿ, ತಾಲೂಕ ಅಗ್ನಿಶಾಮಕ ಠಾಣೆ, ತಾಲೂಕ ಕೇಂದ್ರ ಗ್ರಂಥಾಲಯ ಹಾಗೂ ವಸತಿ ನಿಲಯ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಕುರಿತು ಚರ್ಚಿಸಿ ಸೋಮವಾರ ಭೂಮಿ ಪೂಜೆ ಮಾಡಲಾಗುವುದು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವ ಎನ್ ಎಸ್ ಬೋಸರಾಜು ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರರಾದ ಅಶೋಕ್ ಪವರ್, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ್, ನೀರಾವರಿ ಇಲಾಖೆಯ ವಿಜಯಲಕ್ಷ್ಮಿ, ವೀರೇಶ ನಾಯಕ ಸೇರಿದಂತೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್