ಹಿಂದೂಪುರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಹೆಚ್ಚುವರಿ ನಿಲುಗಡೆ
ಹಿಂದೂಪುರ, 27 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾಚಿಗುಡ–ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಿಂದೂಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ನೀಡುವ ಕಾರ್ಯಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಇಂದು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ವಿಶೇಷ ಸಂದರ್ಭದಲ್ಲಿ ಹಿಂದೂಪು
Vance bharat


ಹಿಂದೂಪುರ, 27 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಾಚಿಗುಡ–ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಿಂದೂಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ನೀಡುವ ಕಾರ್ಯಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಇಂದು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಈ ವಿಶೇಷ ಸಂದರ್ಭದಲ್ಲಿ ಹಿಂದೂಪುರ ಸಂಸದ ಪಾರ್ಥಸಾರಥಿ, ಹಿಂದೂಪುರ ಮುನ್ಸಿಪಾಲಿಟಿ ಅಧ್ಯಕ್ಷ ಡಿ.ಇ. ರಮೇಶ್, ವಿಧಾನಪರಿಷತ್ ಸದಸ್ಯ ತಿಪ್ಪರಸ್ವಾಮಿ ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಪುರದಲ್ಲಿ ಹೆಚ್ಚುವರಿ ನಿಲುಗಡೆ ದೊರೆತಿರುವುದರಿಂದ ಈ ಪ್ರದೇಶದ ಪ್ರಯಾಣಿಕರಿಗೆ ಬೆಂಗಳೂರು ಹಾಗೂ ತೆಲಂಗಾಣದ ನಡುವೆ ಸಂಚಾರ ಸುಗಮವಾಗಲಿದೆ. ಅಲ್ಲದೆ ವ್ಯಾಪಾರ, ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಪ್ರಯಾಣಿಸುವ ಜನರಿಗೆ ಮಹತ್ತರ ಅನುಕೂಲ ಒದಗಲಿದೆ ಎಂದು ಸಚಿವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande