ರಾಯಚೂರು : ಡಿಸೆಂಬರ್ 29ರಿಂದ 31 ರವರೆಗೆ ಕೃಷಿ, ಪಶುವೈದ್ಯಕೀಯ ಸಮ್ಮೇಳನ
ರಾಯಚೂರು, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಕೃಷಿ ಅಭಿವೃದ್ಧಿ ಸಹಕಾರಿ ನಿಯಮಿತ ಬಾರಾಮುಲ್ಲಾ, ಜಮ್ಮು ಮತ್ತು ಕಾಶ್ಮೀರ ಇವರ ಸಹಯೋಗದಲ್ಲಿ “ಕೃಷಿ, ಪಶುವೈದ್ಯಕೀಯ ಮತ್ತು ಕೃಷಿಗೆ ಸಂಬಂಧಿತ ವಿಷಯಗಳಲ್ಲಿ ಸುಸ್ಥಿರ ನಾವಿನ್ಯತೆಗಳ” ಕು
ರಾಯಚೂರು : ಡಿಸೆಂಬರ್ 29ರಿಂದ 31 ರವರೆಗೆ ಕೃಷಿ, ಪಶುವೈದ್ಯಕೀಯ ಸಮ್ಮೇಳನ


ರಾಯಚೂರು, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಕೃಷಿ ಅಭಿವೃದ್ಧಿ ಸಹಕಾರಿ ನಿಯಮಿತ ಬಾರಾಮುಲ್ಲಾ, ಜಮ್ಮು ಮತ್ತು ಕಾಶ್ಮೀರ ಇವರ ಸಹಯೋಗದಲ್ಲಿ “ಕೃಷಿ, ಪಶುವೈದ್ಯಕೀಯ ಮತ್ತು ಕೃಷಿಗೆ ಸಂಬಂಧಿತ ವಿಷಯಗಳಲ್ಲಿ ಸುಸ್ಥಿರ ನಾವಿನ್ಯತೆಗಳ” ಕುರಿತಾದ ಅಂತರಾಷ್ಟ್ರೀಯ ಸಮ್ಮೇಳನವು (ಆನ್‌ಲೈನ್ ಮತ್ತು ಆಫ್‌ಲೈನ್) ಡಿಸೆಂಬರ್ 29 ರಿಂದ 31 ರವರೆಗೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶ್ರೀ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ನಡೆಯುತ್ತಿದೆ.

ಮೂರು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ ಉದಯೋನ್ಮುಖ ತಂತ್ರಜ್ಞರು, ಸಂಶೋಧನಾ ವಿದ್ವಾಂಸರು, ಶೈಕ್ಷಣಿಕ ಮತ್ತು ಕೃಷಿ ಉದ್ಯಮದ ಪ್ರತಿನಿಧಿಗಳು, ನೀತಿ ನಿರೂಪಕರು ಹಾಗೂ ವಿದ್ಯಾರ್ಥಿಗಳನ್ನೊಳಗೊಂಡಂತೆ ಸುಮಾರು 500ಕ್ಕಿಂತ ಹೆಚ್ಚು ಸಮ್ಮೇಳನಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಅಲ್ಲದೇ, ಕುವೈತ್ ಹಾಗೂ ಮತ್ತಿತರ ದೇಶಗಳಿಂದಲೂ ಕೂಡ ಸಮ್ಮೇಳನಾರ್ಥಿಗಳು ಭಾಗವಹಿಸುವರು. ಕೃಷಿ, ಪಶುವೈದ್ಯಕೀಯ ಮತ್ತು ಕೃಷಿಗೆ ಸಂಬಂಧಿಸಿದ ವಿಜ್ಞಾನಗಳ ವಿಷಯಾಧಾರಿತ ಕ್ಷೇತ್ರಗಳ ಅಡಿಯಲ್ಲಿ ಮೌಖಿಕ ವಿಷಯ ಮಂಡನೆಗೆ ಸಮ್ಮೇಳನವು ಸಾಕ್ಷಿಯಾಗಲಿದೆ.

ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ. ಎಚ್. ಶ್ರೀನಿವಾಸ ಉದ್ಘಾಟಿಸುವರು. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಎಂ. ಹನುಮಂತಪ್ಪ ಅವರು ಅಧ್ಯಕ್ಷತೆ ವಹಿಸುವರು. ಡಾ. ಎಸ್. ವಿ ಸುರೇಶ್, ಗೌರವಾನ್ವಿತ ಕುಲಪತಿಗಳು, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು, ಡಾ. ಆರ್. ಸಿ. ಜಗದೀಶ್, ಗೌರವಾನ್ವಿತ ಕುಲಪತಿಗಳು, ಕೆಎಸ್‌ಎನ್ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಡಾ. ಕೆ. ಸಿ. ವೀರಣ್ಣ, ಕುಲಪತಿಗಳು, ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಡಾ. ಪಿ. ಎಲ್. ಪಾಟೀಲ್, ಗೌರವಾನ್ವಿತ ಕುಲಪತಿಗಳು, ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಡಾ. ವಿಷ್ಣುವರ್ಧನ, ಗೌರವಾನ್ವಿತ ಕುಲಪತಿಗಳು, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟ ಹಾಗೂ ಶ್ರೀ ಪಿ. ಕಮರ್-ಉದ್-ದಿನ್ ಅಧ್ಯಕ್ಷರು, ರಾಷ್ಟ್ರೀಯ ಕೃಷಿ ಅಭಿವೃದ್ಧಿ ಸಹಕಾರಿ ನಿಯಮಿತ ಬಾರಾಮುಲ್ಲಾ, ಜಮ್ಮು ಮತ್ತು ಕಾಶ್ಮೀರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಅಧಿಕಾರಿಗಳು, ಪ್ರಾಧ್ಯಾಪಕ ವೃಂದ, ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ ದೇಶದೆಲ್ಲೆಡೆಯಿಂದ ಬರುವ ಸಮ್ಮೇಳನಾರ್ಥಿಗಳು ಉಪಸ್ಥಿತರಿರುವರು ಎಂದು ಕೃವಿವಿಯ ಆಡಳಿತಾಧಿಕಾರಿಗಳು ಹಾಗು ಸಮ್ಮೇಳನ ಸಂಘಟನಾ ಅಧ್ಯಕ್ಷರಾದ ಡಾ.ಜಾಗೃತಿ. ಬಿ ದೇಶಮಾನ್ಯ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande