ನಾಳೆ ಬಸವಾದಿ ಶರಣರ ಹಿಂದೂ ಸಮಾವೇಶ
ವಿಜಯಪುರ, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.೨೯ ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನಿಧ್ಯದಲ್ಲಿ ಈ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳ
ಬಬಲೇಶ್ವರ


ವಿಜಯಪುರ, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.೨೯ ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನಿಧ್ಯದಲ್ಲಿ ಈ ಸಮಾವೇಶ ನಡೆಯಲಿದೆ.

ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ೬೦*೧೦೦ ಅಳತೆಯ ಬೃಹತ್ ವೇದಿಕೆಯನ್ನು ರೂಪಿಸಲಾಗಿದ್ದು, ೧೦ ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ ೫೦೦ ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವ ನಿರೀಕ್ಷೆ ಇದ್ದು, ಹಿಂದೂ ಧರ್ಮ ಚಿಂತಕರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕರು ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಕನೇರಿ ಶ್ರೀಗಳಿಗೂ ಸಹ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

ಸಮಾರಂಭಕ್ಕೆ ವಿಜಯಪುರದಿಂದಲೂ ೨ ಸಾವಿರಕ್ಕೂ ಹೆಚ್ಚು ಬೈಕ್ ರ‍್ಯಾಲಿ ಮೂಲಕ ಯುವಕರು ಪ್ರಯಾಣ ಬೆಳೆಸಲಿದ್ದು, ಈ ಬೈಕ್ ರ‍್ಯಾಲಿ ಸಾರವಾಡಕ್ಕೆ ತಲುಪಲಿದೆ.

ಅಲ್ಲಿ ಸಾವಿರಾರು ಯುವಕರು ಬೈಕ್ ರ‍್ಯಾಲಿ ಮೂಲಕ ಸಾಗಲಿದ್ದಾರೆ. ಶಾಂತವೀರ ವೃತ್ತದಿಂದ ೪ ಸಾವಿರ ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಅಣ್ಣ ಬಸವೇಶ್ವರ ವೃತ್ತ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಮಾರ್ಗದಲ್ಲಿ ಈ ಕುಂಭ ಮೆರವಣಿಗೆ ಸಾಗಲಿದ್ದು, ಸಮಾವೇಶ ನಡೆಯಲಿರುವ ಸ್ಥಳಕ್ಕೆ ತಲುಪಲಿದೆ.

ಹಿಂದೂ ಧರ್ಮ ಸಂಘಟನೆಯ ಏಕೈಕ ಉದ್ದೇಶದೊಂದಿಗೆ ಈ ಸಮಾವೇಶ ಆಯೋಜಿಸಲಾಗುತ್ತಿದೆ, ಅನೇಕ ಪೂರ್ವಭಾವಿ ಸಭೆಗಳನ್ನು ಬೆಳಗಾವಿ, ವಿಜಯಪುರ, ಬಬಲೇಶ್ವರದಲ್ಲಿ ನಡೆಸಲಾಗಿದೆ, ಸಾವಿರಾರು ಜನರು ಈ ಸಮಾವೇಶದಲ್ಲಿ ಭಾಗವಹಿಸುತ್ತಾರೆ, ೫೦೦ ಕ್ಕೂ ಹೆಚ್ಚು ಮಠಾಧೀಶರು ಭೌಗವಹಿಸಲಿದ್ದಾರೆ ಎಂದು ಸಮಾವೇಶದ ಸಂಚಾಲಕರಾದ ರವಿಕಾಂತ ಬಗಲಿ ವಿವರಣೆ ನೀಡಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಪ್ರಮುಖರಾದ ವಿಜುಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಚಂದ್ರಶೇಖರ ಕವಟಗಿ, ಭೀಮಾಶಂಕರ ಹದನೂರ, ರಾಜು ಬಿರಾದಾರ, ಪ್ರಭು ಹಿರೇಮಠ, ಮಲ್ಲು ಕನ್ನೂರ, ಈರಣ್ಣ ಶಿರಮಗೊಂಡ, ಉಮೇಶ ಕೋಳಕೂರ, ಕಲ್ಲಪ್ಪ ಕೊಡಬಾಗಿ ವಿಜಯ್ ಜೋಶಿ ಸಿದ್ದು ಮಲ್ಲಿಕಾರ್ಜುನ್ ಮಠ ವಿಕಾಸ್ ಪದಕಿ ಬಾಲರಾಜ ರೆಡ್ಡಿ, ಸಂಪತ್ ಕಾಳೆ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande