
ನವದೆಹಲಿ, 29 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್‌ನ ಮೊದಲ ಅಧ್ಯಕ್ಷ ಹಾಗೂ ಸ್ವಾತಂತ್ರ್ಯ ಹೋರಾಟಗಾರ ವ್ಯೋಮೇಶ್ ಚಂದ್ರ ಬ್ಯಾನರ್ಜಿ ಅವರ ಜನ್ಮವಾರ್ಷಿಕೋತ್ಸವದ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರು ಗೌರವ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡ ಅವರು, ಬ್ಯಾನರ್ಜಿ ಅವರನ್ನು ರಾಷ್ಟ್ರೀಯ ಚಳವಳಿಯ ಆರಂಭಿಕ ಶಿಲ್ಪಿ, ಸಾಂವಿಧಾನಿಕ ರಾಜಕೀಯ ಹಾಗೂ ಪ್ರಜಾಪ್ರಭುತ್ವ ಸಂವಾದದ ಅಡಿಪಾಯ ಹಾಕಿದ ನಾಯಕ ಎಂದು ಶ್ಲಾಘಿಸಿದ್ದಾರೆ. 1885ರ ಕಾಂಗ್ರೆಸ್ ಮೊದಲ ಅಧಿವೇಶನದ ಅಧ್ಯಕ್ಷರಾಗಿದ್ದ ಬ್ಯಾನರ್ಜಿ, ಸ್ವದೇಶಿ ಚಳವಳಿಗೆ ಬೆಂಬಲ ನೀಡಿದ್ದರು.
1844ರಲ್ಲಿ ಜನಿಸಿದ ವ್ಯೋಮೇಶ್ ಚಂದ್ರ ಬ್ಯಾನರ್ಜಿ, ಖ್ಯಾತ ನ್ಯಾಯಶಾಸ್ತ್ರಜ್ಞರಾಗಿದ್ದು, ಭಾರತೀಯ ಸ್ವಾತಂತ್ರ್ಯ ಚಳವಳಿಯ ಆರಂಭಿಕ ಹಂತಗಳಲ್ಲಿ ರಾಷ್ಟ್ರೀಯ ಏಕತೆಯನ್ನು ಬಲಪಡಿಸಿದ ಮಹತ್ವದ ಪಾತ್ರ ವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa