
ನವದೆಹಲಿ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಹಾಗೂ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಅಮಿತ್ ಶಾ ಅವರು ಇಂದು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾಗೆ ಭೇಟಿ ನೀಡಲಿದ್ದಾರೆ.
ರಾಜಧಾನಿಯಲ್ಲಿ ಅವರ ಎರಡು ಪ್ರಮುಖ ಕಾರ್ಯಕ್ರಮಗಳು ನಿಗದಿಯಾಗಿವೆ ಎಂದು ಬಿಜೆಪಿ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದೆ.
ಬೆಳಿಗ್ಗೆ 11.30ಕ್ಕೆ ಕೋಲ್ಕತ್ತಾದ ಆಲ್ಟ್-ಏರ್ ಹೋಟೆಲ್‌ನಲ್ಲಿ ನಡೆಯುವ ಪತ್ರಿಕಾಗೋಷ್ಠಿಯನ್ನು ಶಾ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅದೇ ಹೋಟೆಲ್‌ನಲ್ಲಿ ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯ ಕೋರ್ ಸಮಿತಿಯ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿಯೂ ಅವರು ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ಪಕ್ಷದ ಸಂಘಟನಾ ಬಲವರ್ಧನೆ, ಮುಂದಿನ ರಾಜಕೀಯ ಕಾರ್ಯತಂತ್ರ ಹಾಗೂ ಸಂಘಟನೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa