
ವಿಜಯಪುರ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವೀರರಾಣಿ ಕಿತ್ತೂರು ಚೆನ್ನಮ್ಮ ಮೂರ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಬಾರದು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದಿಂದ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಬೆಳಗಾವಿ ಅಧಿವೇಶನದ ವೇಳೆ ಪಂಚಮಸಾಲಿ ಸಮಾಜದ ಮೇಲೆ ಲಾಠಿ ಪ್ರಹಾರ ಮಾಡಿದ್ದಾರೆ. ಇದರಿಂದ ಪಂಚಮಸಾಲಿ ಸಮಾಜದ ಮುಖಂಡರು, ಹೋರಾಟರರಿಗೆ ನೋವುಂಟು ಮಾಡಿದೆ. ಅಲ್ಲದೇ, ಪಂಚಮಸಾಲಿ ಸಮಾಜದ ಮುಖಂಡರನ್ನು ಭೇಟಿ ಕೂಡ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 9ಕ್ಕೆ ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ನಿರ್ಮಾಣವಾಗಿರುವ ಚೆನ್ನಮ್ಮ ಮೂರ್ತಿ ಅನಾವರಣ ಮಾಡಬಾರದು. ಬೇಕಿದ್ರೇ ಸರ್ಕಾರದ ಬೇರೆ ಸಚಿವರು ಉದ್ಘಾಟನೆ ಮಾಡಬಹುದು ಎಂದು ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande