
ಬೆಂಗಳೂರು, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕಳೆದ ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದ ಪಪ್ಪಿಗೆ ಹೊಸ ವರ್ಷದ ಮುನ್ನ ನಿರಾಳತೆ ಲಭಿಸಿದೆ.
ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿ, ಗೋವಾ ಹಾಗೂ ಮುಂಬೈ ಸೇರಿದಂತೆ ಪಪ್ಪಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಸತತ 18 ಗಂಟೆಗಳ ಪರಿಶೀಲನೆ ವೇಳೆ ಕೋಟ್ಯಂತರ ರೂಪಾಯಿ ನಗದು, ವಿದೇಶಿ ಕರೆನ್ಸಿ, ಚಿನ್ನಾಭರಣ, ವಾಹನಗಳು ಹಾಗೂ ಅಂತಾರಾಷ್ಟ್ರೀಯ ಕ್ಯಾಸಿನೊ ಸದಸ್ಯತ್ವ ಕಾರ್ಡ್‌ಗಳು ಮತ್ತು ಐಷಾರಾಮಿ ಹೋಟೆಲ್‌ಗಳ ಮೆಂಬರ್‌ಶಿಪ್‌ಗಳು ಪತ್ತೆಯಾಗಿದ್ದವು.
ವ್ಯವಹಾರ ಸಂಬಂಧ ಸಿಕ್ಕಿಂನ ಗ್ಯಾಂಗ್ಟಕ್‌ಗೆ ತೆರಳುತ್ತಿದ್ದ ಸಂದರ್ಭದಲ್ಲೇ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa