
ವಿಜಯಪುರ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಇಂಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಮಾರ್ಸನಳ್ಳಿ ಗ್ರಾಮದಲ್ಲಿರುವ ಮೆ.ಕರ್ನಾಟಕ ಕಾಟನ್ ಸೀಡ್ಸ್ ಪ್ರೆöÊ.ಲಿ. ನಲ್ಲಿ ಸಿಸಿಆಯ್ ಇವರು 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು, ಇಂಡಿ ಹಾಗೂ ಚಡಚಣ ತಾಲೂಕಿನ ರೈತರು ಈ ಹತ್ತಿ ಖರೀದಿ ಕೇಂದ್ರದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಇಂಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆ ತಿಳಿಸಿದೆ.
ಕ್ರೀಡಾ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ವಿಜಯಪುರ. ಡಿ.29 (ಕರ್ನಾಟಕ ವಾರ್ತೆ): ದಿನಾಂಕ:01-01-2024 ರಿಂದ 31-12-2025ರವರೆಗೆ ನಡೆದ ರಾಷ್ಟಿçÃಯ ಹಾಗೂ ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಸೇನಾ ಸಿಬ್ಬಂದಿ ಹಾಗೂ ಮಾಜಿ ಸೈನಿಕರ ಅವಲಂಬಿತ ಮಕ್ಕಳಿಂದ ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅಗತ್ಯ ದಾಖಲಾತಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08352-250913 ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.31ರಂದು ಖಾಲಿ ಇರುವ ಎಂಎಸ್‌ಸ್ಸಿ ನರ್ಸಿಂಗ್ ಸೀಟುಗಳ ಭರ್ತಿಗಾಗಿ ಪ್ರವೇಶಾತಿ
ವಿಜಯಪುರ. ಡಿ.29 (ಕರ್ನಾಟಕ ವಾರ್ತೆ): ವಿಜಯಪುರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ 2025-26ನೇ ಸಾಲಿನಲ್ಲಿ ಕೆಇಎ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿಕೆಯಾಗಿರುವ ಎಂಎಸ್‌ಸ್ಸಿ ನರ್ಸಿಂಗ್ ಸೀಟುಗಳ ಭರ್ತಿಗಾಗಿ ಮೆರಿಟ್ ಆಧಾರದ ಮೇಲೆ ಜಿಲ್ಲಾಸ್ಪತ್ರೆಯ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ ಡಿಸೆಂಬರ್ 31ರ ಬೆಳಿಗ್ಗೆ 9 ಗಂಟೆಯಿAದ ಮಧ್ಯಾಹ್ನ 1ಗಂಟೆಯವರೆಗೆ ಪ್ರಥಮ ವರ್ಷದ ಅಭ್ಯರ್ಥಿಗಳ ಪ್ರವೇಶಾತಿ ನಡೆಯಲಿದೆ ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 4 ರಿಂದ 6ರವರೆಗೆ ಕೃಷಿ ಮೇಳ
ವಿಜಯಪುರ. ಡಿ.29 (ಕರ್ನಾಟಕ ವಾರ್ತೆ): ಕೃಷಿ ವಿಶ್ವವಿದ್ಯಾಲಯ ಧಾರವಾಡ-ವಿಜಯಪುರ ಹಾಗೂ ಕೃಷಿ ಸಂಬAಧಿತ ಇಲಾಖೆಗಳ ಸಹಯೋಗದಲ್ಲಿ ಜನವರಿ 04 ರಿಂದ 06ರವರೆಗೆ ವಿಜಯಪುರದ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ.
ಜ.4ರಂದು ಬೆಳಿಗ್ಗೆ 11ಕ್ಕೆ ಉದ್ಘಾಟನೆಯನ್ನು ಕೃಷಿ ಸಚಿವರಾದ ಹಾಗೂ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳೂ ಆದ ಎನ್.ಚಲುವರಾಯಸ್ವಾಮಿ ಅವರು ನೆರವೇರಿಸಲಿದ್ದಾರೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಕೃಷಿ ಪ್ರಕಟಣೆಗಳನ್ನು ಬಿಡುಗಡೆ ಮಾಡಲಿದ್ದು, ಶಾಸಕರಾದ ವಿಠ್ಠಲ ಕಟಕಧೋಂಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಶಾಸಕರೂ ಆದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಬಿ. ಹುಕ್ಕೇರಿ,ಕರ್ನಾಟಕ ಸೋಪ್ಸ್ ಮತ್ತು ಡಿಟಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ. ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳು, ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande