
ಬಳ್ಳಾರಿ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸ0ಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಅರ್ಹರಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಕಾಲಾವಧಿಯನ್ನು ಜನವರಿ 09 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಗಳನ್ನು ಆನ್ ಲೈನ್ ಸೇವಾಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ನಿಗಧಿತ ಅವಧಿಯ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅವಧಿ ಮೀರಿ ಬರುವ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ. 08392 – 275182 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್