
ಕೊಪ್ಪಳ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜನವರಿ 1 ರಿಂದ 25 ರವರೆಗೆ ಸುಮಾರು ಒಂದು ತಿಂಗಳವರೆಗೆ ಕೊಪ್ಪಳ ನಗರದಲ್ಲಿರುವ ಶ್ರೀ ಗವಿಸಿದ್ದೇಶ್ವರ ಸ್ವಾಮಿಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮ ಜರುಗಲಿದ್ದು, ಈ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಅಕ್ಕಪಕ್ಕದ ರಾಜ್ಯಗಳಿಂದ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಭಕ್ತಾದಿಗಳು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಸಮಯದಲ್ಲಿ ಸಾರ್ವಜನಿಕರು ಕೆಲವು ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಪಾಲಿಸಬೇಕು. ನೀರನ್ನು ಮಿತವಾಗಿ ಬಳಕೆ ಮಾಡಬೇಕು. ತಮ್ಮ ಮನೆಯಿಂದ ಸಂಗ್ರಹವಾಗುವ ಕಸವನ್ನು ರಸ್ತೆಯಲ್ಲಿ/ಚರಂಡಿಯಲ್ಲಿ ಹಾಕದೇ ನಗರಸಭೆಯ ಕಸ ಸಂಗ್ರಹಣೆ ವಾಹನಗಳಿಗೆ ಹಾಕಬೇಕು. ಹಸಿ ಕಸ ಮತ್ತು ಒಣ ಕಸವನ್ನು ಕಡ್ಡಾಯವಾಗಿ ಬೇರ್ಪಡಿಸಿ ನಗರಸಭೆಯ ವಾಹನಗಳಿಗೆ ನೀಡತಕ್ಕದ್ದು.
ನಗರದಲ್ಲಿರುವ ವಿವಿಧ ವ್ಯಾಪಾರ ವಹಿವಾಟು ನಡೆಸುತ್ತಿರುವ ಉದ್ದಿಮೆದಾರರು ತಮ್ಮ ಉದ್ದಿಮೆಗಳಿಂದ ಉತ್ಪತ್ತಿಯಾಗುವ ಕಸವನ್ನು ಸಂಗ್ರಹಿಸಿಕೊ0ಡು ನಗರಸಭೆಯ ವಾಹನಗಳಿಗೆ ಹಾಕತಕ್ಕದ್ದು.
ಹೋಟೆಲ್/ಖಾನಾವಳಿ ಉದ್ದಿಮೆದಾರರು ತಮ್ಮ ಉದ್ದಿಮೆಯಿಂದ ಉತ್ಪತ್ತಿಯಾಗುವ ಕಸ ಮತ್ತು ತ್ಯಾಜ್ಯ ನೀರನ್ನು ರಸ್ತೆಯಲ್ಲಿ ಹಾಕದೇ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ಕಸ ಸಂಗ್ರಹಿಸುವ ವಾಹನಗಳಿಗೆ ನೀಡತಕ್ಕದ್ದು.
ಸಾರ್ವಜನಿಕರು ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಮಾಡದಂತೆ ಸೂಚಿಸಿದೆ. ಬಯಲು ಶೌಚ ಮಾಡದಂತೆ ನಗರಸಭೆಯಿಂದ ಜಾತ್ರಾ ಆವರಣದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ತಾತ್ಕಾಲಿಕ ಶೌಚಾಲಯಗಳು ಹಾಗೂ ಗವಿಮಠದಿಂದ ನಿರ್ಮಿಸಲಾದ ಶೌಚಾಲಯಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ತಮ್ಮ ಮನೆಯ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳತಕ್ಕದ್ದು.
ಮೇಲ್ಕಾಣಿಸಿದ ಎಲ್ಲಾ ಪ್ರಮುಖ ಅಂಶಗಳನ್ನು ಸಾರ್ವಜನಿಕರು ಪಾಲನೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮವಹಿಸಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್