ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ನವದೆಹಲಿ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2026ರ ನವೆಂಬರ್‌ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗಳಿಗೆ ಸಂಬಂಧಿಸಿದಂತೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಕಟಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್
List


ನವದೆಹಲಿ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2026ರ ನವೆಂಬರ್‌ನಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗಳಿಗೆ ಸಂಬಂಧಿಸಿದಂತೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಕಟಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದ್ದು, ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಅಭ್ಯರ್ಥಿಗಳ ವಿವರ ಹೀಗಿದೆ:

ಪಶ್ಚಿಮ ಪದವೀಧರ ಕ್ಷೇತ್ರ : ಮೋಹನ್ ಲಿಂಬಿಕಾಯಿ

ದಕ್ಷಿಣ-ಪೂರ್ವ ಪದವೀಧರ ಕ್ಷೇತ್ರ : ಶಶಿ ಹುಲಿಕುಂಟೆಮಠ

ಉತ್ತರ-ಪೂರ್ವ ಶಿಕ್ಷಕರ ಕ್ಷೇತ್ರ : ಶರಣಪ್ಪ ಮಠೂರು

ಬೆಂಗಳೂರು ಶಿಕ್ಷಕರ ಕ್ಷೇತ್ರ : ಪುಟ್ಟಣ್ಣ

ಈ ಮೂಲಕ ವಿಧಾನ ಪರಿಷತ್ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷ ತನ್ನ ಸಿದ್ಧತೆಯನ್ನು ಆರಂಭಿಸಿದ್ದು, ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರಗಳಲ್ಲಿ ಸಂಘಟಿತವಾಗಿ ಸ್ಪರ್ಧಿಸಲು ಮುಂದಾಗಿದೆ. ಅಭ್ಯರ್ಥಿಗಳ ಘೋಷಣೆಯಿಂದ ರಾಜ್ಯ ರಾಜಕೀಯದಲ್ಲಿ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande