ವಿಶೇಷ ತರಬೇತಿ ಶಿಬಿರ ಆಯೋಜನೆ
ಗದಗ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಗದಗ ದಿ. ಕೆ.ಸಿ.ಸಿ. ಬ್ಯಾಂಕ್ ಲಿ, ಹಾಗೂ ಗದಗ ಸಹಕಾರ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷ-2025 ಗದಗ ಹಾಗೂ ನರಗುಂದ ತಾಲೂಕುಗಳ ಪ್ರಾಥಮ
ಫೋಟೋ


ಗದಗ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಗದಗ ದಿ. ಕೆ.ಸಿ.ಸಿ. ಬ್ಯಾಂಕ್ ಲಿ, ಹಾಗೂ ಗದಗ ಸಹಕಾರ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷ-2025 ಗದಗ ಹಾಗೂ ನರಗುಂದ ತಾಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ಡಿಸೆಂಬರ್ 31 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಪಾಲಾ ಬದಾಮಿ ರಸ್ತೆ ಗಾಂಧಿ ಸರ್ಕಲ್ ಹತ್ತಿರ ದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿ.ಎಂ.ಪಾಟೀಲ ವಹಿಸುವರು. ಧಾರವಾಡದ ಕೆ.ಸಿ.ಸಿ.ಬ್ಯಾಂಕ್ ಲಿ. ನಿರ್ದೇಶಕ ಎಂ.ಎಫ್. ಕಲಗುಡಿ ಕಾರ್ಯಕ್ರಮ ಉದ್ಘಾಟಿಸುವರು. ಕೆ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಂ.ಎಸ್. ಪಾಟೀಲ ಅವರು ಸಹಕಾರಿ ಪಿತಾಮಹ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.

ಮುಖ್ಯ ಅತಿಥಿಗಳಾಗಿ ಧಾರವಾಡದ ಕೆ.ಸಿ.ಸಿ. ಬ್ಯಾಂಕ್ ಲಿ ನಿರ್ದೇಶಕ ಸಿ.ಬಿ.ದೊಡ್ಡಗೌಡ್ರ, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ ಉಪಾಧ್ಯಕ್ಷ ವೈ.ಎಫ್. ಪಾಟೀಲ, ಸಹಕಾರ ಸಂಘಗಳ ಉಪನಿಬಂಧಕ ಶ್ರೀಮತಿ ಎಸ್.ಎಸ್.ಕಬಾಡೆ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ನಿರ್ದೇಶಕ ಎಚ್.ಮಂಜಪ್ಪ , ಸಹಕಾರ ಸಂಘಗಳ ಸಹಾಯಕ ನಿಬಂಧಕ ಶ್ರೀಮತಿ ಪುಷ್ಪಾ ಕೆ ಕಡಿವಾಳ , ನರಗುಂದ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಕಾಶ ನವಲಗುಂದ, ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶಾಂತಾ ಎಚ್.ಎಂ.ಕೆ.ಸಿ.ಸಿ.ಬ್ಯಾಂಕ್ ಲಿ ಜಿಲ್ಲಾ ನಿಯಂತ್ರಣಾಧಿಕಾರಿ ಎಸ್.ಎಂ.ಚಿಕ್ಕಮಠ ಆಗಮಿಸುವರು.

ಜಿಲ್ಲಾ ಸಹಕಾರ ಯೂನಿಯನ್ ನಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಸ್ ಕರಿಯಪ್ಪನವರ, ಗದಗ ಜಿಲ್ಲಾ ಸಮನ್ವಯಾಧಿಕಾರಿ ಎಸ್.ವಿ.ಹಿರೇಮಠ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande