

ಕೊಪ್ಪಳ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜನರೇ ಇಲ್ಲದ ದೇವರನ್ನು ತೆಗೆದುಕೊಂಡು ಏನ ಮಾಡಬೇಕು, ದೇವರು ಸಮೃದ್ಧ ಆಗುವ ಸಮಯದಲ್ಲಿ ಭಕ್ತರು ಸ್ಮಶಾನದ ಕಡೆಗೆ ಸಾಗಿದ್ದಾರೆ, ಇಲ್ಲಿನ ಕಾರ್ಖಾನೆ ಕೊಳವೆಗಳು ಫಿರಂಗಿಗಳಾಗಿವೆ ಎಂದು ಹಿರಿಯ ಚಿಂತಕ ರಹಮತ್ ತರೀಕೆರೆ ಅಭಿಪ್ರಾಯ ಪಟ್ಟರು.
ಅವರು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕಾಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಅನಿರ್ಧಿಷ್ಟ ಧರಣಿಯ 61ನೇ ದಿನದ ಹೋರಾಟ ಬೆಂಬಲಿಸಿ ಮಾತನಾಡಿದರು.
ತುಂಗಭದ್ರ ನದಿ ಈಗ ಚರಂಡಿಯಾಗಿ ಪರಿವರ್ತನೆ ಆಗುತ್ತಿದೆ, ಇಲ್ಲಿಂದ ಜಿಂದಾಲ್ ವರೆಗೆ 70 ಕಿಮೀ ಅಪಾಯಕಾರಿ ಮಾಲಿನ್ಯದ ಕಾರಿಡಾರ್ ಆಗಿದೆ, ಅದು ಜಗತ್ತಿನ ಅತ್ಯಂತ ಕೆಟ್ಟ ಸ್ಥಳವಾಗಿ ಪರಿವರ್ತನೆ ಆಗುತ್ತಿದೆ. ಕಂಪನಿ ಮತ್ತು ಅವರ ಪರವಾಗಿರುವ ಜನ ಶತ್ರುಗಳನ್ನು ನಮ್ಮ ನಡುವೆ ಹುಟ್ಟು ಹಾಕಿರುವದು ಬಹಳ ದೊಡ್ಡ ನೋವಿನ ಸಂಗತಿ ಎಂದರು.
ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ, ಕಾರ್ಖಾನೆ ವಿರುದ್ಧದ ಈ ಹೋರಾಟದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಾಲ್ಕು ದಿಗ್ಗಜರಾದ ಹೆಚ್. ಎಸ್. ಪಾಟೀಲ್, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಎ. ಎಂ. ಮದರಿ ಮತ್ತು ಅತಿಥಿ ರಹಮತ್ ತರೀಕೆರೆ ಅವರು ಇರುವ ವೇದಿಕೆಯಾಗಿದ್ದು ಸರಕಾರ ಮತ್ತು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.
ಧರಣಿಯಲ್ಲಿ ಪುಷ್ಪಲತಾ ಏಳುಭಾವಿ, ಬಿ.ಜಿ.ಕರಿಗಾರ, ಸಾವಿತ್ರಿ ಮುಜುಮದಾರ್, ಸಿ. ವಿ. ಜಡಿಯವರ, ಎಸ್. ಬಿ. ರಾಜೂರು, ಗಂಗಾಧರ ಖಾನಾಪೂರ, ರವಿ ಕಾಂತನವರ, ಕವಿ ಮಹೇಶ ಮನ್ನಾಪುರ, ಎಂ. ಡಿ. ಪಾಟೀಲ್, ಶಂಭುಲಿಂಗಪ್ಪ ಆರ್. ಹರಗೇರಿ, ಮಂಜುನಾಥ್ ಆಟೋ, ಮಂಜುನಾಥ್ ಕೊಂಡನಹಳ್ಳಿ, ಶಾಂತಯ್ಯ ಅಂಗಡಿ, ಯಲ್ಲಪ್ಪ ಕೋಳೂರು, ಎಸ್. ಮಹಾದೇವಪ್ಪ ಮಾವಿನಮಡು, ಈರಯ್ಯಸ್ವಾಮಿ ಸಾಲಿಮಠ, ಗೀತಾ ಭೋವಿ, ಸದಾಶಿವ ಪಾಟೀಲ್, ರಮೇಶ ಡಂಬ್ರಳ್ಳಿ ಕುಣಿಕೇರಿ, ರಮೇಶ ಕೋಳೂರು, ಶಿವಪ್ಪ ಜಲ್ಲಿ ಬಸವರಾಜ್ ನರೇಗಲ್, ಪಾಮಣ್ಣ ಕೆ ಮಲ್ಲಾಪುರ, ಮಖ್ಬುಲ್ ರಾಯಚೂರು ಪಾಲ್ಗೊಂಡರು.
ಇದಕ್ಕೂ ಮೊದಲು ಬೆಳಿಗ್ಗೆ ಖ್ಯಾತ ವಿಮರ್ಶಕ, ಸಂಶೋಧಕ ರಹಮತ್ ತರೀಕೆರೆ ಅವರು ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕರು ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಬಿ. ಗೋನಾಳ, ಪುಸ್ತಕ ಪ್ರಕಾಶ ಡಿ.ಎಂ.ಬಡಿಗೇರ, ಮಾಲಾ ಬಡಿಗೇರ ಅವರು ಕಾರ್ಖಾನೆಗಳಿಂದ ಬಾಧಿತವಾದ ಗಿಣಿಗೇರಿ, ಅಲ್ಲಾನಗರ, ಹಿರೇಬಗನಾಳ, ಚಿಕ್ಕಬಗನಾಳ, ಕುಣಿಕೇರಿ, ಕುಣಿಕೇರಿ ತಾಂಡಾ, ಹಾಲವರ್ತಿ ಗ್ರಾಮಗಳಿಗೆ ವಾಸ್ತವ ಸ್ಥಿತಿ ವೀಕ್ಷಿಸಿದರು. ಹಿರೇಬಗನಾಳ ಗ್ರಾಮದ ಕರಿಯಮ್ಮ ದೇವಸ್ಥಾನದಲ್ಲಿ ಸೇರಿದ ರೈತರನ್ನು ರಹಮತ್ ತರೀಕೆರೆ ಇವರ ತಂಡದಲ್ಲಿದ್ದವರು ಮಾತನಾಡಿಸಿ ಮಾಹಿತಿ ಪಡೆದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್