ಇಬ್ಬರು ರೌಡಿಗಳು, ಕಲಬುರಗಿ ಜೈಲ್‌ಗೆ ರವಾನೆ
ವಿಜಯಪುರ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರದ ಇಬ್ಬರು ಕುಖ್ಯಾತ ರೌಡಿಗಳನ್ನು ಬಂಧಿಸಿ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ. 9 ಪ್ರಕರಣಗಳಲ್ಲಿ ಭಾಗಿಯಾಗಿರುವ ಫರ್ಹಾನ್ ಅಹಮದಿ ಹಾಗೂ
ರೌಡಿ


ವಿಜಯಪುರ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರದ ಇಬ್ಬರು ಕುಖ್ಯಾತ ರೌಡಿಗಳನ್ನು ಬಂಧಿಸಿ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.

9 ಪ್ರಕರಣಗಳಲ್ಲಿ ಭಾಗಿಯಾಗಿರುವ ಫರ್ಹಾನ್ ಅಹಮದಿ ಹಾಗೂ 12 ಪ್ರಕರಣಗಳಲ್ಲಿ ಭಾಗಿಯಾಗಿರುವ ಸಿದ್ದಪ್ಪ ಮೂಡಲಗಿ ಈ ಇಬ್ಬರನ್ನು ವಿಜಯಪುರದಲ್ಲಿ ಬಂಧಿಸಿ ಕಲಬುರಗಿ ಕಾರಾಗೃಹಕ್ಕೆ ಒಪ್ಪಿಸಲಾಗಿದೆ. ಇನ್ನು ಆರೋಪಿತರ ಮೇಲೆ ವಿವಿಧ ಕ್ರಿಮಿನಲ್ ಕೇಸ್‌ಗಳಿದ್ದು, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಗೂಂಡಾ ಕಾಯ್ದೆಯಲ್ಲಿ ಬಂಧಿಸಲಾಗಿದೆ. ಸದರಿ ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಎಸ್ಪಿ ಶ್ಲಾಘನೀಯ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande