ಯಲಬುರ್ಗಾ : ರಾಷ್ಟ್ರೀಯ ಗ್ರಾಹಕರ ದಿನಾಚರಣೆ
ಯಲಬುರ್ಗಾ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ
ಯಲಬುರ್ಗಾ : ರಾಷ್ಟ್ರೀಯ ಗ್ರಾಹಕರ ದಿನಾಚರಣೆ


ಯಲಬುರ್ಗಾ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮತ್ತು ಯಲಬುರ್ಗಾ ತಹಶೀಲ್ದಾರ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿ.31 ರಂದು ಬೆಳಿಗ್ಗೆ 11.30 ಗಂಟೆಗೆ ಯಲಬುರ್ಗಾದ ಕಂದಾಯ ಭವನದಲ್ಲಿ ಡಿಜಿಟಲ್ ನ್ಯಾಯಾಂಗದ ಮೂಲಕ ಪರಿಣಾಮಕಾರಿ ಮತ್ತು ತ್ವರಿತ ವಿಲೇವಾರಿ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಉದ್ಘಾಟಿಸುವರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಜಿ.ಇ. ಸೌಭಾಗ್ಯಲಕ್ಷ್ಮೀ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್.ದರಗದ್ ಅವರು ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ರಾಜು ಎನ್.ಮೇತ್ರಿ ಅವರು ಭಾಗವಹಿಸುವರು. ಕೊಪ್ಪಳ ನ್ಯಾಯವಾದಿಗಳಾದ ಸಾವಿತ್ರಿ ಮುಜುಮದಾರ ಅವರು ವಿಶೇಷ ಉಪನ್ಯಾಸ ನೀಡುವರು.

ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರವಿಕುಮಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ. ಅಲಕನಂದ ಡಿ. ಮಳಗಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ ಬಿರಾದರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande