
ಹೊಸಪೇಟೆ, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ in: ಬೆಂಬಲ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ ರೂ.8000 ರಂತೆ ರೈತರಿಂದ ಖರೀದಿಗಾಗಿ ಖರೀದಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ವಿಜಯನಗರ ಶಾಖೆಯಿಂದ ಜಿಲ್ಲೆಯಲ್ಲಿ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಕಚೇರಿ ಹರಪನಹಳ್ಳಿಯಲ್ಲಿ, ಮೊ.9686709600, ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ ಕಚೇರಿ ಮರಿಯಮ್ಮನಹಳ್ಳಿ, ಹಗರಿಬೊಮ್ಮನಹಳ್ಳಿ ಮೊ.6743453271, ಹೂವಿನಹಡಗಲಿ ಮೊ. 7259822170 ಮತ್ತು ತುಂಗಾಭದ್ರ ಗ್ರೌಂಡ್ ನಟ್ ಫಾರ್ಮರ್ಸ್ ಪ್ರೂಡ್ಯೂಸರ್ ಕಂಪನಿ ಲಿಮಿಟೆಡ್ ಮೊ.6363144145 ಕೂಡ್ಲಿಗಿ ಗಳಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಲಾಗಿದೆ. ಜಿಲ್ಲೆಯ ರೈತರು ಬೆಂಬಲ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಯಾವುದೇ ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ನೇರವಾಗಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ತಿಳಿಸಿದ್ದಾರೆ.
ಅಗತ್ಯ ದಾಖಲೆಗಳು : 2025-26 ನೇ ಸಾಲಿನ ಪಹಣಿ ಪತ್ರ, ಆಧಾರ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ, ರೈತರು ಪ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿರಬೇಕು. ಮತ್ತು ಎಫ್‌ಡಿ ಯನ್ನು ಎಫ್‌ಐಡಿ ಯನ್ನು ಪಡೆಯುವುದು ಕಡ್ಡಾಯ. ರೈತರಲ್ಲಿ ಪ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಪ್ರೂಟ್ಸ್ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್