ಅಪಘಾತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಲು ಡಿಸಿ ಸೂಚನೆ
ವಿಜಯಪುರ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು. ಬುಧವಾರ
ಅಪಘಾತ


ವಿಜಯಪುರ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟಿçÃಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬ0ಧಿಸಿದ ಇಲಾಖೆಗಳು ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಸೂಕ್ತ ಗುರುತು ಫಲಕ, ಅಗತ್ಯವಿದ್ದಲ್ಲಿ ಬ್ಯಾರಿಕೇಡ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳು ನಡೆಯದಂತೆ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.

ಅಧಿಕಾರಿಗಳು ಜಿಲ್ಲೆಯಲ್ಲಿರುವ ಅಪಘಾತ ವಲಯಗಳಿಗೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಬಹುದಾದ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ, ಅಪಘಾತ ತಡೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ ಅವರು, ಈ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೈಗೊಂಡ ಕ್ರಮಗಳ ಕುರಿತು ಮುಂದಿನ ಸಭೆಯಲ್ಲಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಪದೇ ಪದೇ ಅಪಘಾತಗಳು ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳ ತಡೆಗೆ ಸೂಕ್ತ ಕ್ರಮ ವಹಿಸಬೇಕು. ಅವಶ್ಯವಿದ್ದೆಡೆ ಸೈನೇಜ್ ಬೋರ್ಡ ಬ್ಯಾರಿಕೇಡ್ ಹಾಕಬೇಕು. ರಸ್ತೆ ಅಭಿವೃದ್ದಿ ಸಂದರ್ಭದಲ್ಲಿ ಈ ಎಲ್ಲ ಅಂಶಗಳು ಒಳಗೊಳ್ಳುವಂತೆ ನೋಡಿಕೊಳ್ಳಬೇಕು. ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಆಯೋಜಿಸುವ ಮೂಲಕ ಜನರಲ್ಲಿ ಸೂಕ್ತ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ರಸ್ತೆಗಳಲ್ಲಿ ಅಳವಡಿಸಲಾದ ಗುರುತು ಫಲಕಗಳು ಹಾಗೂ ರಸ್ತೆ ನಿಯಮಗಳ ಪಾಲನೆಗೆ ವಾಹನ ಸವಾರರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಬೇಕು. ಕಡ್ಡಾಯವಾಗಿ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಬೇಕು. ವಾಹನ ನಂಬರ್ ಪ್ಲೇಟ್ ಸ್ಪಷ್ಟವಾಗಿ ಕಾಣುವಂತಿರಬೇಕು. ನೈಟ್ ವ್ಹಿಜನ್, ಸಿಸಿಟಿವಿ ಕ್ಯಾಮರಾ ಅಳವಡಿಸಿ ನಿಗಾ ಇರಿಸಿದ್ದಲ್ಲಿ ಅಪಘಾತ ತಡೆಗೆ ಅನುಕೂಲವಾಗುವುದರಿಂದ ಆದ್ಯತೆಯ ಮೇಲೆ ಈ ಕಾರ್ಯವನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಖಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ ಬಾಬಾ ಮುದ್ದೇಬಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಸಿ.ಎಸ್.ಪೊಲೀಸ್‌ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande