ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ವ್ಯಾಪಕ ಜಾಗೃತಿ : ಡಿಸಿ
ವಿಜಯಪುರ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ನೋಡಿಕೊಳ್ಳಲು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನ
ಡಿಸಿ


ವಿಜಯಪುರ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ನೋಡಿಕೊಳ್ಳಲು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.

ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮಾದಕ ವಸ್ತು ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ವ್ಯಸನಕ್ಕೆ ಒಳಗಾಗಿ ತಮ್ಮ ಸುಂದರ ಬದುಕನ್ನು ಹಾಳು ಮಾಡಿಕೊಳ್ಳದಂತೆ ಮಾದಕ ವಸ್ತು-ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸೂಕ್ತ ತಿಳುವಳಿಕೆ-ಜಾಗೃತಿ ಮೂಡಿಸಬೇಕು.ಶಾಲೆ-ಕಾಲೇಜುಗಳಲ್ಲಿ, ವಿದ್ಯಾರ್ಥಿ ನಿಲಯಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ-ಅರಿವು ಮೂಡಿಸುವುದಲ್ಲದೇ ವಿದ್ಯಾರ್ಥಿಗಳು ತಮ್ಮ ನೆರೆ-ಹೊರೆಯವರಿಗೆ ತಿಳಿಸಿಕೊಡುವಂತೆ ಪ್ರೇರೆಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.

ವೈದ್ಯಕೀಯ ಬಳಕೆಗೆ ಪೂರ್ವಾನುಮತಿ ಇಲ್ಲದೇ ಇರುವ ಹಾಗೂ ನೋಂದಣಿಯಾಗದೆ ಇರುವ ಔಷಧಾಲಯಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯ ಔಷಧ ಮಳಿಗೆಗಳಿಗೆ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಔಷಧ ಮಳಿಗೆಗಳಲ್ಲಿ ಅಗತ್ಯ ವಹಿಗಳನ್ನು ನಿರ್ವಹಿಸಲಾಗುತ್ತಿರುವ, ಸ್ಟಾಕ್ ರಜಿಸ್ಟರ್ ಸೇರಿದಂತೆ ಸಮಗ್ರವಾಗಿ ಪರಿಶೀಲನೆ ನಡೆಸಬೇಕು. ಎಲ್ಲ ಔಷಧ ಅಂಗಡಿಗಳಲ್ಲಿ ‘ವೈದ್ಯರ ನಿರ್ದೇಶನವಿಲ್ಲದೇ ಔಷಧ ಮಾರಾಟ ನಿಷೇಧ’ ಕುರಿತು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಔಷಧಾಲಯಗಳಿಗೆ ತಿಳುವಳಿಕೆ ನೀಡಬೇಕು. ಔಷಧ ಅಂಗಡಿಗಳಲ್ಲಿ ಮಾದಕ ಅಂಶಗಳುಳ್ಳ ಔಷಧಿಗಳನ್ನು ವೈದ್ಯರ ಅನುಮತಿ ಇಲ್ಲದೇ ಮಾರಾಟ ಮಾಡದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಬೆಳೆ ಬೆಳೆಯದಂತೆ ಕಾನೂನು ಅರಿವು, ಜಾಗೃತಿ ಮೂಡಿಸಬೇಕು. ಎಲ್ಲ ಪಬ್ ಹಾಗೂ ಬಾರ್ ಆವರಣದಲ್ಲಿ ಎನ್‌ಸಿಬಿ ಸೂಚನಾ ಫಲಕಗಳನ್ನು ಪ್ರದರ್ಶಿಸುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ನಿರಂತರವಾಗಿ ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಳೆದ 2023 ರಿಂದ 2025ನೇ ಸಾಲಿನವರೆಗೆ ಮಾದಕ ದ್ರವ್ಯಗಳ 93 ಪ್ರಕರಣಗಳು ದಾಖಲಾಗಿದ್ದು, 932.312 ಗ್ರಾಂ ಮಾದಕ ದ್ರವ್ಯಗಳನ್ನ ಜಪ್ತಿ ಮಾಡಲಾಗಿದೆ. 857.782 ಕೆ.ಜಿ. ಗಾಂಜಾ ಹಾಗೂ 18.432 ಕೆ.ಜಿ. ಅಫೀಮ್‌ನ್ನು ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ,ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ ಬಾಬಾ ಮುದ್ದೇಬಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಸಿ.ಎಸ್.ಪೊಲೀಸ್‌ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande