ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಆಗ್ರಹ
ವಿಜಯಪುರ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ನಿರ್ಮಿಸಿರುವ ವೀರರಾಣಿ ಕಿತ್ತೂರು ಚೆನ್ನಮ್ಮ ಮೂರ್ತಿಯ ಪಕ್ಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆಯವರು ವಿಜಯಪುರ ನಗರದ ಜ
ರಾಯಣ್ಣ


ವಿಜಯಪುರ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ನಿರ್ಮಿಸಿರುವ ವೀರರಾಣಿ ಕಿತ್ತೂರು ಚೆನ್ನಮ್ಮ ಮೂರ್ತಿಯ ಪಕ್ಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆಯವರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರ ಬಸ್ ನಿಲ್ದಾಣದ ಮುಂದೆ ಚೆನ್ನಮ್ಮನವರ ಮೂರ್ತಿ ಸ್ಥಾಪಿಸಲಾಗಿದೆ. ಅದಕ್ಕಾಗಿ ಅದರ ಪಕ್ಕದಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಸ್ಥಾಪಿಸಿ ಇಬ್ಬರ ಇತಿಹಾಸ ಮುಂದಿನ ಪೀಳಿಗೆಗೆ ತಿಳಸುವಂತೆ ಆಗಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande