ಸಬರಮತಿ ಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಕಲಿಕಾ ಸಾಮಾಗ್ರಿ ವಿತರಣೆ
ಸಬರಮತಿ ಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಕಲಿಕಾ ಸಾಮಾಗ್ರಿ ವಿತರಣೆ
ಕೋಲಾರ ತಾಲ್ಲುಕಿನ ಸಬರಮತಿ ಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್‌ನಿಂದ ಕಲಿಕಾ ಸಾಮಾಗ್ರಿ ವಿತರಿಸಲಾಯಿತು.


ಕೋಲಾರ, ೩೧ ಡಿಸೆಂಬರ್ (ಹಿ.ಸ) :

ಆ್ಯಂಕರ್ : ತಾಲೂಕಿನ ಸುಗಟೂರು ಗ್ರಾಮದ ಸಬರಮತಿ ಸಂಯುಕ್ತ ಪ್ರೌಡಶಾಲೆಯ ೨೪೦ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕೋಲಾರ ವತಿಯಿಂದ ಸಂಕಲ್ಪ ಲರ್ನಿಂಗ್ ಪುಸ್ತಕಗಳನ್ನು ವಿತರಿಸಿದರು.

ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್ ಅಶೋಕ್ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಓದಿನೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು, ಉತ್ತಮ ಗುಣಮಟ್ಟ ಶಿಕ್ಷಣವನ್ನು ಪಡೆದು ಉತ್ತಮ ಪ್ರಜೆಗಳಾಗಿ ತಂದೆ ತಾಯಿ ಮತ್ತು ಗುರುಗಳಿಗೆ ಗೌರವ ತರುವ ಕೆಲಸ ಮಾಡಬೇಕು ವಿದ್ಯಾರ್ಥಿಗಳು ಇನ್ನುಳಿದ ಎರಡು ಮೂರು ತಿಂಗಳಲ್ಲಿ ಅಭ್ಯಾಸದ ಕಡೆ ಗಮನ ಹರಿಸಿ ಉತ್ತಮ ಅಂಕಗಳನ್ನು ಪಡೆಯಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಧುಮಾಲತಿ ಪಡುವಣೆ ಈ ವರ್ಷ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಾಸಾಗಲು ಮುಖ್ಯ ಪರೀಕ್ಷೆಯಲ್ಲಿ ಒಂದು ವಿಷಯಕ್ಕೆ ೧೩ ಅಂಕಗಳಿಗೆ ಇಲಾಖೆ ಇಳಿಸಿದ್ದು ವಿದ್ಯಾರ್ಥಿಗಳು ಅಷ್ಟಕ್ಕೆ ಸಿಮೀತವಾಗದೆ ಹೆಚ್ಚು ಅಂಕಗಳನ್ನು ಪಡೆಯಲು ಶ್ರಮಿಸಬೇಕು ಜೊತೆಗೆ ಗುಣಾತ್ಮಕ ಫಲಿತಾಂಶಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ತಿಳಿಸಿದರು,

ಸಬರಮತಿ ಶಾಲೆಯ ಕಾರ್ಯದರ್ಶಿ ಬಿ ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸಬರಮತಿ ಶಾಲೆಯು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ಶಾಲೆಯಾಗಿದ್ದು ಗುಣಮಟ್ಟದ ಶಿಕ್ಷಣ ಹಾಗೂ ಶಿಸ್ತಿಗೆ ಹೆಸರುವಾಸಿಯಾಗಿದೆ. ಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ೨೪೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ತಾಲೂಕಿನಲ್ಲಿ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುವ ಶಾಲೆಯಾಗಿದೆ. ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ಪಡೆಯಲು ಶಿಕ್ಷಣ ಇಲಾಖೆಯೊಂದಿಗೆ ಕೈ ಜೋಡಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಬರಮತಿ ಶಾಲೆಯ ಮುಖ್ಯೋಪಾಧ್ಯಾಯ ಪಿ.ಆರ್ ದೊಡ್ಡಾರೆಡ್ಡಿ, ಶಿಕ್ಷಣ ಸಂಯೋಜಕ ಮಂಜುನಾಥ, ರೋಟರಿ ಕ್ಲಬ್ ಹಾಗೂ ಕೆಡಿಪಿ ಸದಸ್ಯ, ಪ್ರಗತಿಪರ ರೈತ ತುರಾಂಡಳ್ಳಿ ಎನ್.ರವಿ, ರೋಟರಿ ನಾಗೇಶ್, ಇಸಿಒ ಸಿ.ವಿ ನಾಗರಾಜ್, ಶಿಕ್ಷಕ ರಮೇಶ್ ಭಾಗವಹಿಸಿದ್ದರು.

ಚಿತ್ರ : ಕೋಲಾರ ತಾಲ್ಲುಕಿನ ಸಬರಮತಿ ಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್‌ನಿಂದ ಕಲಿಕಾ ಸಾಮಾಗ್ರಿ ವಿತರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande