
ಕೋಲಾರ, ೩೧ ಡಿಸೆಂಬರ್ (ಹಿ.ಸ) :
ಆ್ಯಂಕರ್ : ಗ್ರಾಮ ಪಂಚಾಯಿತಿಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕಾಯಕ ಗ್ರಾಮ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ರಾಜ್ಯ ಸರ್ಕಾರವು ಆಯವ್ಯಯಲ್ಲಿ ಘೋಷಣೆಯಂತೆ ಹಿರಿಯ ಅಧಿಕಾರಿಗಳಿಂದ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿಗಳನ್ನು ಎಲ್ಲಾ ಹಂತಗಳಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ದತ್ತು ಯೋಜನೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಕಾಯಕ ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಸರ್ಕಾರದ ನಿರ್ದೇಶನದಂತೆ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ.
ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳು ಆಯ್ಕೆ ಮಾಡಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸವುದು. ಗ್ರಾಮ ಪಂಚಾಯಿತಿ ಕಾರ್ಯನಿರ್ವಹಣೆ, ನಿಯಮಿತವಾಗಿ ವಿವಿಧ ಸಭೆಗಳ ಆಯೋಜನೆ, ತೆರಿಗೆ ವಸೂಲಾತಿ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಇದರೊಂದಿಗೆ ಲೆಕ್ಕ ಪತ್ರ ನಿರ್ವಹಣೆ, ಮೂಲ ಸೌಕರ್ಯ ಅಭಿವೃದ್ಧಿ, ಅರಿವು ಕೇಂದ್ರ, ಕೂಸಿನ ಮನೆ. ಶಿಕ್ಷಣ, ಆರೋಗ್ಯ ತೆರಿಗೆ ಸಂಗ್ರಹ. ಯೋಜನಾ ತಯಾರಿಕೆ. ಸೇವಾ ವಿತರಣೆ, ಮಹಾತ್ಮ ಗಾಂಧಿ ನರೇಗಾ ಯೋಜನೆ, ಕುಡಿಯುವ ನೀರು, ಬೀದಿ ದೀಪಗಳ ನಿರ್ವಹಣೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸೇರಿದಂತೆ ಎಲ್ಲಾ ವಲಯಗಳಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಗ್ರಾಮ ಪಂಚಾಯತಿಗಳ ಕಾರ್ಯಕ್ಷಮತೆ ಆಧಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚತ0ತ್ರ ತಂತ್ರಾ0ಶದಲ್ಲಿ ಪ್ರತಿ ತಿಂಗಳು ಶ್ರೇಯಾಂಕ ನೀಡುತ್ತದೆ. ಕಾರ್ಯಕ್ಷಮತೆ ಶ್ರೇಯಾಂಕದಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ದತ್ತು ಆಯ್ಕೆ ಮಾಡಬೇಕು.
ಮೊದಲಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ಕಾರ್ಯದರ್ಶಿಗಳು, ಯೋಜನಾ ನಿರ್ದೇಶಕರು, ಮುಖ್ಯ ಲೆಕ್ಕಾಧಿಕಾರಿ ಮತ್ತು ಮುಖ್ಯ ಯೋಜನಾಧಿಕಾರಿಗಳು ಜಿಲ್ಲೆಯಲ್ಲಿ ಹಿಂದುಳಿದ ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅದೇ ರೀತಿ ತಾಲ್ಲೂಕು ಕಾರ್ಯನಿರ್ವಾಕ ಅಧಿಕಾರಿಗಳು, ಸಹಾಯಕ ನಿರ್ದೇಶಕರಿಗೆ ತಮ್ಮ ವ್ಯಾಪ್ತಿಯ ಹಿಂದುಳಿದ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
ಇಲಾಖೆಯ ಹಿರಿಯ ಆಧಿಕಾರಿಗಳು ಆಯ್ಕೆ ಮಾಡಲಾದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬAಧಿಸಿದAತೆ ಕಾಲಕಾಲಕ್ಕೆ ಮೇಲ್ವಿಚಾರಣೆ ನಡೆಸಲಿದ್ದಾರೆ. ಮೊದಲಿಗೆ ಗ್ರಾಮ ಪಂಚಾಯತಿಗಳ ಪ್ರಸ್ತುತ ವಾಸ್ತವ ಸ್ಥಿತಿಗತಿಗಳನ್ನು ದಾಖಲೀಕರಿಸಿ, ಮುಂದಿನ ಅಭಿವೃದ್ಧಿಗೆ ಬಗ್ಗೆ ನೀಲನಕ್ಷೆ ಸಿದ್ಧಪಡಿಸಲಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳಲ್ಲಿ ದೊರೆಯುವ ಅನುದಾನಗಳು ಮತ್ತು ಸೌಲಭ್ಯಗಳನ್ನು ಒಗ್ಗೂಡಿಸುವುದು. ಪ್ರತ್ಯೇಕವಾದ ಕ್ರಿಯಾ ಯೋಜನೆ ಸಿದ್ಧಪಡಿಸುವುದು ಮತ್ತು ಕಾಲಮಿತಿಯೊಳಗೆ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ೧೫ ದಿನಗಳಿಗೊಮ್ಮೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕಾರ್ಯಕ್ರಮದ ಅನುಷ್ಠಾನ ಮೇಲ್ವಿಚಾರಣೆ ಮಾಡಲಾಗುವುದು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ ಮಾತನಾಡಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಕಾಯಕ ಗ್ರಾಮ ಯೋಜನೆಯಿಂದ ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಜಿಲ್ಲೆಯಲ್ಲಿ ಅತೀ ಹಿಂದುಳಿದ ಗ್ರಾಮ ಪಂಚಾಯತಿಗನ್ನು ಈಗಾಗಲೇ ಕಾಯಕ ಗ್ರಾಮ ಯೋಜನೆಗೆ ಆಯ್ಕೆ ಮಾಡಲಾಗಿದ್ದು, ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಂಚಿಕೆ ಮಾಡಲಾಗಿದೆ. ಹಿರಿಯ ಆಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಗ್ರಾಮ ಪಂಚಾಯತಿಗಳನ್ನು ಮಾದರಿ ಪಂಚಾಯತಿಗಳಾಗಿ ಅಭಿವೃದ್ಧಿ ಪಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ ರಮೇಶ್ ಮಾತನಾಡಿಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ೩೫ ಹಿಂದುಳಿದ ಗ್ರಾಮ ಪಂಚಾಯತಿಗಳನ್ನು ಹಿರಿಯ ಅಧಿಕಾರಿಗಳು ದತ್ತು ಪಡೆದುಕೊಂಡಿದ್ದಾರೆ. ಕಾಯಕ ಗ್ರಾಮಗಳಲ್ಲಿ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ತೆರಿಗೆ ಸಂಗ್ರಹ, ನರೇಗಾ, ಸ್ವಚ್ಚ ಭಾರತ್ ಮಿಷನ್, ಜಲ ಜೀವನ್ ಮಿಷನ್ ಪ್ರಗತಿ ಸೇರಿದಂತೆ ಸರ್ಕಾರದ ಅನುದಾನಗಳ ಸಮರ್ಪಕ ಬಳಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಚಿತ್ರ : ಕಾಯಕ ಯೋಜನೆಯಲ್ಲಿ ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ದತ್ತು ಪಡೆಯುವ ಕಾರ್ಯಕ್ರಮವನ್ನು ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಬಾಗೇವಾಡಿ ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್