ಅನುದಾನ ಬಿಡುಗಡೆ ; ಸಚಿವರಿಗೆ ಸಂಸದರ ಪತ್ರ
ಗದಗ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯ ಲಕ್ಷ್ಮೇಶ್ವರ ಗದಗ 221.50 ಕಿ.ಮೀ.ನಿಂದ 227.50 ಕಿ.ಮೀ ವರೆಗೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯ ಅಭಿವೃದ್ಧಿಗೆ 9.50 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೋಕೋಪಯೋ
ಫೋಟೋ


ಗದಗ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯ ಲಕ್ಷ್ಮೇಶ್ವರ ಗದಗ 221.50 ಕಿ.ಮೀ.ನಿಂದ 227.50 ಕಿ.ಮೀ ವರೆಗೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯ ಅಭಿವೃದ್ಧಿಗೆ 9.50 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಪತ್ರ ಬರೆದಿದ್ದಾರೆ.

ಗದಗ ಜಿಲ್ಲೆಯ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ ಲೋಕೋಪಯೋಗಿ ಇಲಾಖೆಯ ಮುಖ್ಯ ರಸ್ತೆಯಾಗಿದ್ದು, ಈ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅತ್ಯಂತ ತೊಂದರೆಯಾಗಿದೆ. ಈ ರಸ್ತೆ ಸುಧಾರಣೆಗೆ 9.80 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಪತ್ರದ ಮೂಲಕ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande