ಸಿರಿಧಾನ್ಯಗಳ ನಡಿಗೆ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಚಾಲನೆ
ಸಿರಿಧಾನ್ಯಗಳ ನಡಿಗೆ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಚಾಲನೆ
ಕೋಲಾರದಲ್ಲಿ ಕೃಷಿ ಇಲಾಖೆಯಿಂದ ನಡೆದ ಸಿರಿ ಧಾನ್ಯಗಳ ನಡಿಗೆ ಜಿಲ್ಲಾಧಿಕಾರಿ ಎಂ.ಆರ್. ರವಿ ಚಾಲನೆ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಾವಿದಾ ನಸೀಮಾ ಖಾನಮ್ ಚಿತ್ರದಲ್ಲಿದ್ದಾರೆ.


ಕೋಲಾರ , ೩೧ ಡಿಸೆಂಬರ್ (ಹಿ.ಸ) :

ಆ್ಯಂಕರ್ : ಹವಾಮಾನ ವೈಪರೀತ್ಯದಿಂದ ಯಾವ ಬೆಳೆಯಬೇಕೆಂಬ ಗೊಂದಲವನ್ನು ರೈತರು ಎದುರಿಸುತ್ತಿದ್ದಾರೆ. ಸಿರಿಧಾನ್ಯಗಳ ಕೃಷಿ ರೈತರಿಗೆ ಲಾಭದಾಯಕವಾಗಿದೆ. ಅಲ್ಲದೆ ಆರೋಗ್ಯಕ್ಕೂ ಒಳ್ಳೆಯದು. ದೈನಂದಿನ ಆಹಾರದಲ್ಲಿ ಪ್ರತಿಯೊಬ್ಬರು ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರಸ್ತುತದಲ್ಲಿ ಆಹಾರವೇ ಆರೋಗ್ಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಾವಿದಾ ನಸೀಮಾ ಖಾನಮ್ ಹೇಳಿದರು.

ಕೋಲಾರ ನಗರದ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ವತಿಯಿಂದ ಅಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯ ನ್ಯೂಟ್ರಿ ಸಿರಿಧಾನ್ಯಗಳ ಕಾರ್ಯಕ್ರಮದಲ್ಲಿ ಆಹಾರ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಸಾವಯವ ಮೇಳ ೨೦೨೬ರ ಪ್ರಯುಕ್ತ ಏರ್ಪಡಿಸಿದ್ದ ಸಿರಿಧಾನ್ಯಗಳ ನಡಿಗೆ, ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿರು.

ದೇಶದಲ್ಲಿನ ಸಿರಿಧಾನ್ಯಗಳು ಸಾಂಪ್ರದಾಯಿಕ ಭಾರತೀಯ ಕೃಷಿಯಲ್ಲಿ ಅತ್ಯಂತ ಪೌಷ್ಠಿಕಾಂಶಯುಕ್ತವಾದ ಧಾನ್ಯಗಳಾಗಿವೆ. ಇವುಗಳನ್ನು ಆಹಾರ ಪದ್ದತಿಯಲ್ಲಿ ಹೆಚ್ಚಾಗಿ ಬಳಕೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಸಿರಿಧಾನ್ಯಗಳಲ್ಲಿ ನಾರು, ಕಬ್ಬಿಣದ ಅಂಶಗಳು ಹಾಗೂ ಕಾರ್ಬೋಹೈಡ್ರೇಟ್‌ಗಳು ಹೆಚ್ಚಾಗಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿರಿಧಾನ್ಯ ಬಳಕೆ ಹಾಗೂ ಪ್ರಯೋಜನ ಕುರಿತ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.

ನಂತರ ನಗರದ ಹೊಸ ಬಸ್ ಸ್ಟಾಂಡ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಯಿತು.

ಇದಕ್ಕೂ ಮುನ್ನ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಲಘು ವ್ಯಾಯಾಮ, ಯೋಗ ಹಾಗೂ ಏರೋಬಿಕ್ಸ್ ಅಭ್ಯಾಸ ಮಾಡಲಾಯಿತು.

ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ನಿಖಿಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ. ಕೆ ರಮೇಶ್, ಕೃಷಿ ಇಲಾಖೆ ಉಪಕೃಷಿ ನಿರ್ದೇಶಕರುಗಳು ಮಂಜುಳ. ಎಂ ಹಾಗೂ ನಾಗರಾಜ್ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಜಯ್ ಕುಮಾರ್, ಎಲ್ಲ ಪದಾಧಿಕಾರಿಗಳು ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ: ಕೋಲಾರದಲ್ಲಿ ಕೃಷಿ ಇಲಾಖೆಯಿಂದ ನಡೆದ ಸಿರಿ ಧಾನ್ಯಗಳ ನಡಿಗೆ ಜಿಲ್ಲಾಧಿಕಾರಿ ಎಂ.ಆರ್. ರವಿ ಚಾಲನೆ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಾವಿದಾ ನಸೀಮಾ ಖಾನಮ್ ಚಿತ್ರದಲ್ಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande