ಹೊಸವರ್ಷ : ಬಳ್ಳಾರಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ
ಬಳ್ಳಾರಿ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ನೂತನ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲಿಕ್ಕಾಗಿ ಜಿಲ್ಲಾ ಪೊಲೀಸ್ ಅತ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಅವರು ಸುದ್ದಿ
ಹೊಸವರ್ಷ : ಬಳ್ಳಾರಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ


ಬಳ್ಳಾರಿ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ನೂತನ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲಿಕ್ಕಾಗಿ ಜಿಲ್ಲಾ ಪೊಲೀಸ್ ಅತ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದು, ಜಿಲ್ಲೆಯಾದ್ಯಂತ 24 ಚೆಕ್‌ಪೋಸ್ಟ್ಗಳನ್ನು, ತೆರೆಯಲಾಗಿದೆ. 02 ಕೆಎಸ್‍ಆರ್‍ಪಿ, 06 ಡಿಎಆರ್ ತುಕಡಿಗಳನ್ನು, 150 ಹೋಂಗಾರ್ಡ್‍ಗಳನ್ನು, 04 ಡಿವೈಎಸ್ಪಿಗಳನ್ನು, 15 ಸಿಪಿಐಗಳನ್ನು, 40 ಪಿಎಸ್ಸೈಗಳನ್ನು, 72 ಎಎಸ್ಸೈಗಳನ್ನು ಮತ್ತು 404 ಪೊಲೀಸ್ ಪೇದೆಗಳನ್ನು ಮತ್ತು ಹೆಡ್ ಕಾನ್ಸ್ಟೇಬಲ್‍ಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande