ಅಂಚೆ ಮೂಲಕ ಕನ್ನಡ ಕಲಿಯಲು ಅವಕಾಶ
ಹೊಸಪೇಟೆ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯ ವತಿಯಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ 1 ವರ್ಷ ಅಂಚೆ ಮೂಲಕ ಕನ್ನಡ ಶಿಕ್ಷಣ ಕಲಿಸಲಾಗುತ್ತಿದ್ದು ಅಸಕ್ತರು ಹೆಸರು ನ
ಅಂಚೆ ಮೂಲಕ ಕನ್ನಡ ಕಲಿಯಲು ಅವಕಾಶ


ಹೊಸಪೇಟೆ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯ ವತಿಯಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ 1 ವರ್ಷ ಅಂಚೆ ಮೂಲಕ ಕನ್ನಡ ಶಿಕ್ಷಣ ಕಲಿಸಲಾಗುತ್ತಿದ್ದು ಅಸಕ್ತರು ಹೆಸರು ನೋಂದಾಯಿಸಿಬಹುದು.

ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕೆಎಸ್‌ಆರ್‌ಟಿಸಿ, ಕೆಪಿಟಿಸಿಎಲ್, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು.

ನೋಂದಣಿತರು ಶುಲ್ಕವಿರುವುದಿಲ್ಲ.

ಆಸಕ್ತರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನೊಳಗಿರಬೇಕು, ಭರ್ತಿ ಮಾಡಿದ ಅರ್ಜಿಯ ಜೊತೆಯಲಿ ರೂ. 250 ಡಿಮ್ಯಾಂಡ್ ಡ್ರಾಫ್ಟ್ ನ್ನು ಕಳುಹಿಸಿ ಕೊಡಬೇಕು. ನೋಂದಾಯಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು.

ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಗುವುದು.

ತರಬೇತಿಯು ಜನವರಿ 2026 ರಿಂದ ಆರಂಭವಾಗುತ್ತದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ.0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟಿಯನ್ನು ಕಳುಹಿಸಿ ಪಡೆದುಕೊಳ್ಳಬಹುದು, ಭರ್ತಿ ಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ ಜನವರಿ 10, 2026 ರೊಳಗೆ ತಲುಪಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande