ದೇಶದ ಜನತೆಗೆ ರಾಷ್ಟ್ರಪತಿಗಳಿಂದ ಹೊಸ ವರ್ಷದ ಶುಭಾಶಯ
ನವದೆಹಲಿ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ದೇಶದಲ್ಲಿಯೂ ವಿದೇಶದಲ್ಲಿಯೂ ವಾಸಿಸುವ ಎಲ್ಲಾ ಭಾರತೀಯರಿಗೆ 2026ರ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಹೊಸ ವರ್ಷವು ಹೊಸ ಶಕ್ತಿ, ಹೊಸ ನಿರೀಕ್ಷೆಗಳು ಮತ್ತು ಸಕಾರಾತ್ಮಕ ಬದಲಾವಣೆಯ ಸಂಕೇತವಾಗಿದ
President


ನವದೆಹಲಿ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ದೇಶದಲ್ಲಿಯೂ ವಿದೇಶದಲ್ಲಿಯೂ ವಾಸಿಸುವ ಎಲ್ಲಾ ಭಾರತೀಯರಿಗೆ 2026ರ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಹೊಸ ವರ್ಷವು ಹೊಸ ಶಕ್ತಿ, ಹೊಸ ನಿರೀಕ್ಷೆಗಳು ಮತ್ತು ಸಕಾರಾತ್ಮಕ ಬದಲಾವಣೆಯ ಸಂಕೇತವಾಗಿದೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಹೊಸ ವರ್ಷ ಆತ್ಮಾವಲೋಕನಕ್ಕೆ ಹಾಗೂ ಹೊಸ ನಿರ್ಣಯಗಳನ್ನು ಕೈಗೊಳ್ಳಲು ಉತ್ತಮ ಅವಕಾಶವನ್ನು ಒದಗಿಸುತ್ತದೆ ಎಂದು ರಾಷ್ಟ್ರಪತಿಗಳು ಹೇಳಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ ಮತ್ತು ಪರಿಸರ ಸಂರಕ್ಷಣೆಯತ್ತ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು.

2026ನೇ ವರ್ಷವು ಪ್ರತಿಯೊಬ್ಬರ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಜೊತೆಗೆ ಬಲಿಷ್ಠ, ಆತ್ಮನಿರ್ಭರ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವ ದಿಕ್ಕಿನಲ್ಲಿ ಎಲ್ಲರಿಗೂ ಹೊಸ ಉತ್ಸಾಹ ಹಾಗೂ ಶಕ್ತಿಯನ್ನು ತುಂಬಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಸಂದೇಶದಲ್ಲಿ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande