
ಸಾಂಬಾ, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಮ್ಮು–ಕಾಶ್ಮೀರದ ಸಾಂಬಾ ಜಿಲ್ಲೆಯ ಫುಲ್ಪುರ್ ಪ್ರದೇಶದಲ್ಲಿನ ಅಂತಾರಾಷ್ಟ್ರೀಯ ಗಡಿಯ ಬಳಿ ಮಂಗಳವಾರ ರಾತ್ರಿ ಅನುಮಾನಾಸ್ಪದ ಡ್ರೋನ್ ಚಟುವಟಿಕೆ ಪತ್ತೆಯಾಗಿದ್ದು, ಭದ್ರತಾ ಸಂಸ್ಥೆಗಳು ತೀವ್ರ ಎಚ್ಚರಿಕೆ ವಹಿಸಿವೆ.
ಬುಧವಾರ ಅಧಿಕೃತ ಮೂಲಗಳು ತಿಳಿಸಿದಂತೆ, ಡ್ರೋನ್ ಕೆಲವು ನಿಮಿಷಗಳ ಕಾಲ ಗಡಿ ಸಮೀಪದ ಆಕಾಶದಲ್ಲಿ ಸುಳಿದಾಡುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಭದ್ರತಾ ಪಡೆಗಳಿಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಳಿಕ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ಡ್ರೋನ್ ಹಾರಾಟದ ಸಾಧ್ಯ ಮಾರ್ಗ ಹಾಗೂ ಉದ್ದೇಶವನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿವೆ.
ಗಡಿ ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ಹೆಚ್ಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa