ಜ.24ಕ್ಕೆ ಜಿಲ್ಲೆಯಾದ್ಯಂತ ವಿಶೇಷ ಲೋಕ ಅದಾಲತ್ : ನ್ಯಾ. ಹರೀಶ ಎ.
ವಿಜಯಪುರ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾ ಕೇಂದ್ರ ಹಾಗೂ ಎಲ್ಲಾ ತಾಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಜನವರಿ 24ರಂದು ವಿಶೇಷ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ
ಅದಾಲತ್


ವಿಜಯಪುರ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಕೇಂದ್ರ ಹಾಗೂ ಎಲ್ಲಾ ತಾಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಜನವರಿ 24ರಂದು ವಿಶೇಷ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಅವರು ತಿಳಿಸಿದರು.

ಬುಧವಾರ ನಗರದ ಜಿಲ್ಲಾ ನ್ಯಾಯಾಲಯ ಕಟ್ಟಡದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ಎಲ್ಲ ಕಕ್ಷಿದಾರರ ಅನುಕೂಲವಾಗುವುದಕ್ಕಾಗಿ ವಿಶೇಷ-ಲೋಕ್-ಅದಾಲತನ್ನು ಹಮ್ಮಿಕೊಳ್ಳಲಾಗಿದ್ದು, ಲೋಕ ಅದಾಲತ್‍ನಲ್ಲಿ ರಾಜೀ ಸಂಧಾನಕ್ಕೆ ಒಳಪಡಬಹುದಾದ ಭೂ-ಸ್ವಾಧೀನ (ಎಲ್.ಪಿ.ಸಿ. ರಾಜೀ ಸಂಧಾನದ ಮೂಲಕ ಇಪಿ) ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪಕ್ಷಗಾರರಿಗೆ ಅವಕಾಶವಿರುವುದರಿಂದ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಜಿಲ್ಲೆಯಲ್ಲಿ ನಡೆಯುವ ಲೋಕ ಅದಾಲತ್ ಕಾರ್ಯಕ್ರಮಗಳಲ್ಲಿ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಸುಮಾರು 2,89,479 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೂ. 18,30,25,426 ಗಳನ್ನು ಪರಿಹಾರ ಒದಗಿಸಲಾಗಿದೆ. ಇದರಿಂದ ವಿಜಯಪೂರ ಜಿಲ್ಲೆಯು ರಾಜಿ ಸಂಧಾನ ಮಾಡುವಲ್ಲಿ ರಾಜ್ಯಕ್ಕೆ ಸತತವಾಗಿ ಮೂರು ಸಲ 2 ನೇ ಸ್ಥಾನ ಪಡೆದುಕೊಂಡಿದ್ದು, ಈ ಬಾರಿ ಜನವರಿ 24 ರಂದು ನಡೆಯುವ ವಿಶೇಷ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಹೆಚ್ಚಿನ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಈ ಕುರಿತು ವ್ಯಾಪಕವಾಗಿ ಜನರಲ್ಲಿ ತಿಳುವಳಿಕೆ ಮೂಡಿಸುವಂತೆ ತಿಳಿಸಿದರು.

ಜ.2ರಿಂದ 90 ದಿನಗಳವರೆಗೆ ವಿಶೇಷ ಮಧ್ಯಸ್ಥಿಕೆ ಅಭಿಯಾನ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ವಿಶೇಷ ಅಭಿಯಾನದ ಕುರಿತು ಈಗಾಗಲೇ ಸಭೆ ಜರುಗಿಸಿ, ವಿಜಯಪೂರ ಜಿಲ್ಲೆ ಮತ್ತು ಅದರ ಅಧೀನದಲಿ ಬರುವ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆಯ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಕುರಿತು ದಿನಾಂಕ: 02.01.2026 ರಿಂದ 90 ದಿನಗಳವರೆಗೆ 2.0 ಮಧ್ಯಸ್ಥಿಕೆಯ ಅಭಿಯಾನ' ಹಮ್ಮಿಕೊಳ್ಳಲಾಗಿದೆ.

ನ್ಯಾಯಾಲಯಗಳಲಿ, ಬಾಕಿ ಇರುವ ಮಧ್ಯಸ್ಥಿಕೆಯ ಮೂಲಕ ರಾಜಿ ಆಗಬಹುದಾದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಕಳುಹಿಸಿ ಹೆಚ್ಚಿನ ಸಂಖ್ಯೆಯಲಿ ಪ್ರಕರಣಗಳನ್ನು ರಾಜೀ ಸಂಧಾನವಾಗಲು ಸಹಕರಿಸಲು ನ್ಯಾಯಾಲಯದ ಕಕ್ಷಿದಾರರಿಗೆ ಮತ್ತು ವಕೀಲರಿಗೆ ತಿಳಿಸಿ ಅದರ ಸದುಪಯೋಗ ಪಡೆದುಕೊಳ್ಳಲು ಅವರ ಕಕ್ಷಿದಾರರರಿಗೆ ತಿಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೇ, ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮಧ್ಯಸ್ಥಿಕೆಯ ಅಭಿಯಾನ 2.0 ದಿನಾಂಕ: 02.01.2026 ರಿಂದ ಹೊಸದಾಗಿ ಪ್ರಾರಂಭವಾಗುತ್ತಿದ್ದು, ರಾಜಿ ಆಗಬಹುದಾದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳುಹಿಸಿ ಅಲ್ಲಿ ವಿಶೇಷ ತರಬೇತಿ ಹೊಂದಿದ ಮಧ್ಯಸ್ಥಿಕೆಗಾರರಿಂದ ರಾಜಿ ಸಂಧಾನ ಮಾಡಿಸುವ ವ್ಯವಸ್ಥೆ ಇದಾಗಿದೆ. ಕಕ್ಷಿದಾರರು ಸದರಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಅದರ ಮಾಹಿತಿಯನ್ನು ವಕೀಲರುಗಳು ತಮ್ಮ-ತಮ್ಮ ಕಕ್ಷಿದಾರರಿಗೆ ತಿಳಿಸಬೇಕು ಮತ್ತು ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಇಂಡಿ, ಸಿಂದಗಿ, ಬಸವನ ಬಾಗೇವಾಡಿ, ಮುದ್ದೇಬಿಹಾಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಮಾ.14ರಿಂದ ರಾಷ್ಟ್ರೀಯ ಲೋಕ ಅದಾಲತ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲ ಕಲ್ಪಿಸಲು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ದಿನಾಂಕ: 14.03.2026 ರಂದು ರಾಷ್ಟ್ರೀಯ-ಲೋಕ್-ಅದಾಲತನ್ನು ಹಮ್ಮಿಕೊಳ್ಳಲಾಗಿದೆ.

ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ರಾಜೀ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ, ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, (ಖಇಖಂ) ಜಿಲ್ಲಾ, ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಕಾಯಂ ಜನತಾ ನ್ಯಾಲಯದಲಿನ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಪಕ್ಷಗಾರರಿಗೆ ಅವಕಾಶವಿದೆ ಎಂದು ತಿಳಿಸಿದರು.

ಜ.1ರಿಂದ 31ರವರೆಗೆ ರಸ್ತೆ ಸುರಕ್ಷತಾ ಅಭಿಯಾನ : ಕರ್ನಾಟಕ ರಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಜಿಲ್ಲೆ ಮತ್ತು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ತಾಲೂಕುಗಳಲ್ಲಿ ಜ.1 ರಿಂದ 31ರವರೆಗೆ ರಸ್ತೆ ಸುರಕ್ಷತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಸಾರಿಗೆ ಇಲಾಖೆ, ಪೊಲೀಸ್, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು ಮತ್ತು ಎನ್‍ಜಿಓಗಳ ಸಮನ್ವಯತೆಯೊಂದಿಗೆ ಜಿಲ್ಲೆಯ ವಿವಿಧ ಶಾಲೆ, ಕಾಲೇಜುಗಳು, ಸಾರ್ವಜನಿಕ ಖಾಸಗಿ ಸಮಸ್ಥೆಗಳು, ಸಮುದಾಯ ಕೇಂದ್ರಗಳು, ಆಸ್ಪತ್ರೆಗಳು, ಪೊಲೀಸ್ ಮತ್ತು ಸಂಚಾರ ಕಚೇರಿಗಳಲ್ಲಿ ರಸ್ತೆ ಸುರಕ್ಷಾ ಕ್ರಮಗಳ ಕುರಿತು ಸೂಕ್ತ ಜಾಗೃತಿ ಹಾಗೂ ತಿಳುವಳಿಕೆ ಮೂಡಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಜಿಲ್ಲಾ ಬಾರ್ ಅಸೋಸಿಯೇಶನ್ ಖಜಾಂಚಿಗಳಾದ ನ್ಯಾಯವಾದಿ ಎಂ.ಎ.ಕಾಖಂಡಕಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್.ಚೂರಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande