
ನವದೆಹಲಿ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಉತ್ತರ ಪ್ರದೇಶದಿಂದ ಬಿಹಾರದ ನಾನಾ ಭಾಗಗಳಿಗೆ ಅಕ್ರಮ ಮದ್ದುಗುಂಡುಗಳ ಕಳ್ಳಸಾಗಣೆ ಜಾಲವನ್ನು ಬಹಿರಂಗಪಡಿಸುವ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಉತ್ತರ ಪ್ರದೇಶ, ಹರಿಯಾಣ ಮತ್ತು ಬಿಹಾರದ ಒಟ್ಟು 22 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.
ಮೂಲಗಳ ಪ್ರಕಾರ, ಇಂದು ಮುಂಜಾನೆ ಪ್ರತ್ಯೇಕ ಎನ್ಐಎ ತಂಡಗಳು ಶಂಕಿತ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿವೆ. ದಾಳಿಗಳ ವೇಳೆ ಬಂಧನಗಳ ಕುರಿತು ಅಧಿಕೃತವಾಗಿ ಇನ್ನೂ ದೃಢಪಡಿಸಲಾಗಿಲ್ಲ.
ತನಿಖೆ ಮುಂದುವರಿದಿದ್ದು, ಕಾರ್ಯಾಚರಣೆಯ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದೆಂದು ಎನ್ಐಎ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa