
ಬೆಂಗಳೂರು, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ. 63% ಭ್ರಷ್ಟಾಚಾರ ಇದೆ ಎಂದು ಸ್ವತಃ ಉಪಲೋಕಾಯುಕ್ತರೇ ತಮ್ಮ ಘನ ಸರಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ.
ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa