ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ; ಕ್ರಮಕ್ಕೆ ಆರ್. ಅಶೋಕ ಆಗ್ರಹ
ಬೆಂಗಳೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದ ಸರ್ಕಾರಿ ಎಸ್ಸಿ–ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿ ಹಾಸ್ಟೆಲ್‌ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿಯಾಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಕಳವ
Ashok


ಬೆಂಗಳೂರು, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದ ಸರ್ಕಾರಿ ಎಸ್ಸಿ–ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿ ಹಾಸ್ಟೆಲ್‌ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿಯಾಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಪ್ರತಿಕ್ರಿಯೆ ನೀಡಿರುವ ಅಶೋಕರು, “ಬಡ ಕುಟುಂಬದ ಬಾಲಕಿಯರ ವಿದ್ಯಾಭ್ಯಾಸಕ್ಕೆ ಆಸರೆಯಾಗಬೇಕಾದ ಹಾಸ್ಟೆಲ್‌ಗಳು ಇಂದು ಅವ್ಯವಸ್ಥೆಯ ಆಗರವಾಗಿವೆ. ಈ ಪಿಡುಗನ್ನು ತಡೆಗಟ್ಟಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ನಿಮಗೆ ನಿಜವಾಗಿಯೂ ದಲಿತರು, ಹಿಂದುಳಿದವರು, ಬಡವರ ಹೆಣ್ಣುಮಕ್ಕಳ ಮೇಲೆ ಕಾಳಜಿ ಇದ್ದರೆ, ಹೈಕಮಾಂಡ್ ಮೆಚ್ಚಿಸಲು ಡಿ.ಕೆ. ಶಿವಕುಮಾರ್ ಅವರ ಮನೆಗೆ ‘ಹೋಮ್ ಟೂರ್’ ಮಾಡುವುದಕ್ಕೆ ಬದಲು ಸರ್ಕಾರಿ ಹಾಸ್ಟೆಲ್‌ಗಳ ‘ಟೂರ್’ ಮಾಡಿ. ಶ್ರೀಮಂತರ ಮನೆಯಲ್ಲಿ ನಾಟಿಕೋಳಿ ಊಟ ಮಾಡುವ ಬದಲು ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಬಡ ಮಕ್ಕಳಿಗೆ ಸಿಗುವ ‘ರುಚಿ-ಶುಚಿ’ಯ ಊಟವನ್ನು ಒಮ್ಮೆ ತಿಂದು ನೋಡಿ ಎಂದಿದ್ದಾರೆ.

ಅಹಿಂದ ಹೆಸರಿನಲ್ಲಿ ದಲಿತ ಮತ್ತು ಹಿಂದುಳಿದ ವರ್ಗದ ಮತ ಪಡೆದು ಅಧಿಕಾರಕ್ಕೆ ಬಂದ ನಂತರವೂ ಅವರ ಸಮಸ್ಯೆಗಳ ಕಡೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿದ್ದು,

ಅವರಿಗಾಗಿ ನೀವು ನೀಡಿದ ಕೊಡುಗೆ ಏನು ಎಂದು ಅಶೋಕ ಪ್ರಶ್ನಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande