
ಕೊಪ್ಪಳ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024ನೇ ಸಾಲಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2024ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ಗುರಿ:ಒಲಂಪಿಕ್ ಪದಕ, 2023 ಮತ್ತು 2024ರ ಕ್ರೀಡಾ ಸಾಧನೆಗೆ ನಗದು ಪುರಸ್ಕಾರ, ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಕ್ರೀಡಾಪಟುಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಡಿಸೆಂಬರ್ 10 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್