
ಅಂಕೋಲಾ, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಮೋಹನ ಲಿಂಬಿಕಾಯಿ ಮತದಾರರ ನೋಂದಣಿ ಅಭಿಯಾನಕ್ಕೆ ವೇಗ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಣಿಯ ಸಭೆಯಲ್ಲಿ ಭಾಗವಹಿಸಿದ ಅವರು, ಮುಂಬರುವ ಪದವೀಧರ ಕ್ಷೇತ್ರ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಂಘಟನಾತ್ಮಕ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಮೋಹನ ಲಿಂಬಿಕಾಯಿ ಅವರು ಪದವೀಧರರ ನೋಂದಣಿ ಪ್ರಕ್ರಿಯೆಯನ್ನು ವ್ಯಾಪಕವಾಗಿ ಜಾರಿಗೆ ತಂದು, ಎಲ್ಲ ವೃತ್ತಿ ಕ್ಷೇತ್ರಗಳ ಪದವೀಧರರಿಗೆ ತಲುಪುವಂತೆ ತೀವ್ರ ಅಭಿಯಾನ ಕೈಗೊಳ್ಳಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಸಭೆಯಲ್ಲಿ ಮಾಜಿ ಎಂಎಲ್‌ಸಿ ಹರೀಶ್ ಕುಮಾರ್, ಸುನಿಲ ಗೋಂಕರ್, ಆರ್.ಎಚ್. ನಾಯಕ, ವಿನೋದ್ ನಾಯಕ ಸೇರಿದಂತೆ ಹಲವಾರು ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa