ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಗದಗ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ , ನೃತ್ಯ , ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ- ಈ ಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. 2025-26ನೇ ಸಾಲಿ
ಫೋಟೋ


ಗದಗ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ , ನೃತ್ಯ , ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ- ಈ ಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

2025-26ನೇ ಸಾಲಿನ ಶಿಷ್ಯವೇತನಕ್ಕೆ ಆಯ್ಕೆ, ಪ್ರಕ್ರಿಯೆಯನ್ನು ಮೊಬೈಲ್,ವಿಡಿಯೋ ಚಿತ್ರೀಕರಣದ ಮೂಲಕ ಈ ಕೆಳಕಂಡಂತೆ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ.

ಶಿಷ್ಯವೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಫೇಸ್‌ಬುಕ್‌ನಲ್ಲಿ ಮಾಹಿತಿ ಪಡೆದು ವೆಬ್‌ಸೈಟ್ ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.

ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್, ವಿಡಿಯೋ ಚಿತ್ರೀಕರಿಸಿ ಪೆನ್‌ ಡ್ರೈ ಅಳವಡಿಸಿ, ಪೆನ್‌ ಡ್ರೈ ಅರ್ಜಿಯನ್ನು ರಿಜಿಸ್ಟ್ರಾರ್ , ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕನ್ನಡ ಭವನ, 2 ನೇ ಮಹಡಿ , ಜೆ.ಸಿ.ರಸ್ತೆ , ಬೆಂಗಳೂರು- 560 002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.

ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾ ಕಲಾ ಪ್ರಕಾರಕ್ಕೆ ಅನುಗುಣವಾಗಿ ತೀರ್ಪುಗಾರರು ಅಭ್ಯರ್ಥಿಗಳು ಚಿತ್ರೀಕರಿಸಿ ಕಳುಹಿಸಿಕೊಟ್ಟಿರುವ ಪೆನ್ ಡ್ರೈವ್ ಅನ್ನು ಪರಿಶೀಲಿಸಿ ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಠ್ಯಕ್ರಮ ಚಿತ್ರೀಕರಿಸಿದ ಪೆನ್ ಡ್ರೈವ್ ನೊಂದಿಗೆ ಅರ್ಜಿಯನ್ನು ಸ್ವೀಕರಿಸಲು ಡಿಸೆಂಬರ್ 20 ಕೊನೆಯ ದಿನವಾಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-2 ಇಲ್ಲಿ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande