ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಹುಬ್ಬಳ್ಳಿ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2025-26 ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ


ಹುಬ್ಬಳ್ಳಿ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2025-26 ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಶಿಷ್ಯವೇತನ ಅರ್ಜಿಗಳ ಬಗ್ಗೆ, ಮಾಹಿತಿಯನ್ನು ಅಕಾಡೆಮಿ ಫೇಸ್ ಬುಕ್ facebook.com/karnatakasangeetanrutyaacademy, ವೆಬ್ ಸೈಟ್ sangeetanrityaacademy.karnataka.gov.in ಮೂಲಕ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಅಲ್ಲದೇ ಅರ್ಜಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್, ವಿಡಿಯೋ ಚಿತ್ರೀಕರಿಸಿ ಪೆನ್ ಡ್ರೈವ್ ನಲ್ಲಿ ಅಳವಡಿಸಿ, ಪೆನ್ ಡ್ರೈವ್‌‌ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಡಿಸೆಂಬರ್ 20 ರೊಳಗಾಗಿ ತಲುಪಿಸಬೇಕು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್. ನರೇಂದ್ರಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande