ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಗೌರವ ನಮನ
ಬಳ್ಳಾರಿ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ವರ್ಷದ ಮಹಾ ಪರಿನಿರ್ವಾಣ ದಿನ ಅಂಗವಾಗಿ ನಗರದ ಕೌಲ್‌ಬಜಾರ್‌ನ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿನ ಡಾ.ಬಿ.ಆರ್.
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ : ಗೌರವ ನಮನ


ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ : ಗೌರವ ನಮನ


ಬಳ್ಳಾರಿ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ವರ್ಷದ ಮಹಾ ಪರಿನಿರ್ವಾಣ ದಿನ ಅಂಗವಾಗಿ ನಗರದ ಕೌಲ್‌ಬಜಾರ್‌ನ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಲಾಯಿತು.

ಈ ವೇಳೆ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸ0ಸ್ಥೆಗಳ ದಲಿತ ಮುಖಂಡರು, ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande