


ಕೊಪ್ಪಳ, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಆಸೆ ಮಿತಿಮೀರಿ ಹಣವಿದ್ದರೂ ನೆಮ್ಮದಿಯ ನಿದ್ರೆ ಇಲ್ಲದಂಗಾಗಿದೆ. ಭಾರತದಲ್ಲಿ ಮಾನವೀಯತೆಗೆ ಮೊದಲ ಆದ್ಯತೆಕೊಡಬೇಕು ಇಲ್ಲವಾದರೆ ಅಭಿವೃದ್ಧಿ ಹೆಸರಲ್ಲಿ ನಡೆಯುತ್ತಿರುವ ಹುಚ್ಚಾಟದಿಂದ ಅಭಿವೃದ್ಧಿ ಆಗಿ ನಾವೇ ಅಂಗವಿಕಲರಾದರೆ ಅಂತಹ ಅಭಿವೃದ್ಧಿಗೆ ಅರ್ಥವಿಲ್ಲ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಯನ್ಸ್ ಶ್ರೀನಿವಾಸ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.
ಅವರು ನಗರಸಭೆ ಹತ್ತಿರ ನಡೆಯುತ್ತಿರುವ ಬಲ್ಡೋಟ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ ಸುಮಿ, ಎಕ್ಸಿಂಡಿಯಾ, ಹೊಸಪೇಟೆ ಸ್ಟೀಲ್ಸ್ ಇತರೆ ಮಾರಕ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆದಿರುವ ಅನಿರ್ದಿಷ್ಟಾವಧಿ ಧರಣಿ 37ನೇ ದಿನ ಕೊಪ್ಪಳ ಲಯನ್ಸ್ ಕ್ಲಬ್, ಸ್ವಾಮಿ ವಿವೇಕಾನಂದ ಶಾಲೆ ಮತ್ತು ಸ್ವಾಮಿ ವಿವೇಕಾನಂದ ಸಿಬಿಎಸ್ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ಮತ್ತು ಸಿಬ್ಬಂದಿ ಭಾಗವಹಿಸಿ ಬೆಂಬಲಿಸಿ ಮಾತನಾಡಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್